CrimeInternational

ಟೆಕ್ಸಾಸ್ ನಲ್ಲಿ ಭೀಕರ ಅಪಘಾತ; ಆಂಧ್ರ ಶಾಸಕನ 6 ಸಂಬಂಧಿಗಳ ದುರ್ಮರಣ

ಅಮೆರಿಕದ ಟೆಕ್ಸಾಸ್‌ನಲ್ಲಿ ಇಂದು ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಪೂರ್ವ ಗೋದಾವರಿ ಜಿಲ್ಲೆಯ ಆರು ಮಂದಿ ಸಾವನ್ನಪ್ಪಿದ್ದಾರೆ. ಪೂರ್ವ ಗೋದಾವರಿ ಜಿಲ್ಲೆಯ ನಿವಾಸಿಗಳ ಕಾರಿಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದಿದೆ. ಅವರೆಲ್ಲರೂ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಮೃತರೆಲ್ಲರೂ ವಿದ್ಯಾರ್ಥಿಗಳು ಎಂದು ಟೆಕ್ಸಾಸ್ ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಕಾರಣ ಯಾರು ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮೃತರೆಲ್ಲರೂ ವೈಸಿಪಿ ಶಾಸಕ ಸತೀಶ್ ಕುಮಾರ್ ಅವರ ಸಂಬಂಧಿಕರು ಎನ್ನಲಾಗಿದೆ.

Share Post