CrimeDistricts

ವಿದ್ಯಾರ್ಥಿ ಜೊತೆ ಶಿಕ್ಷಕಿಯ ರೊಮ್ಯಾಂಟಿಕ್ ಫೋಟೋ ಶೂಟ್

ಚಿಕ್ಕಬಳ್ಳಾಪುರ; ಆಕೆಗೆ ಅಮ್ಮನ ವಯಸ್ಸು ಹಾಗೂ ಆತನಿಗೆ ಮಗನ ವಯಸ್ಸು.. ಇಬ್ಬರೂ ರೊಮ್ಯಾಂಟಿಕ್ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕು ಮರುಗಮಲ್ಲ ಸರ್ಕಾರಿ ಪ್ರೌಢಶಾಲೆ ವತಿಯಿಂದ ಶೈಕ್ಷಣಿಕ ಪ್ರವಾಸ ಕೈಗೊಳ್ಳಲಾಗಿತ್ತು. ಈ ವೇಳೆ ಮುಖ್ಯಶಿಕ್ಷಕಿ ಪುಷ್ಪಲತಾ ವಿದ್ಯಾರ್ಥಿಯೊಬ್ಬನ ಜೊತೆ ರೊಮ್ಯಾಂಟಿಕ್ ಫೋಟೋ ಶೂಟ್ ಮಾಡಿಸಿಕೊಂಡಿದ್ದಾರೆ. ಈ ಫೋಟೋಗಳು ಎಲ್ಲೆಡೆ ವೈರಲ್ ಆಗುತ್ತಿವೆ.

 ಕೆನ್ನೆಗೆ ಮುತ್ತು ಕೊಡುವಂತೆ, ಸೀರೆ ಸೆರಗು ಎಳೆಯುವಂತೆ, ಎತ್ತಿಕೊಂಡಿರುವಂತೆ ಹೀಗೆ ನಾನಾ ಭಂಗಿಗಳಲ್ಲಿ ರೊಮ್ಯಾಂಟಿಕ್‌ ಆಗಿ ಫೋಟೊ ಶೂಟ್‌ ಮಾಡಿಸಿದ್ದಾರೆ. ವಿದ್ಯಾರ್ಥಿ ಕೂಡ ಶಿಕ್ಷಕಿಯನ್ನು ಮುದ್ದಾಡಿದ್ದಾನೆ.

ಮುಖ್ಯ ಶಿಕ್ಷಕಿ ವಿರುದ್ಧ ವಿದ್ಯಾರ್ಥಿಯ ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಿದ್ದಾರೆ.

Share Post