ಜಪಾನ್‌ನಲ್ಲಿ ಭಾರಿ ಪ್ರಮಾಣದ ಭೂಕಂಪ; ಸುನಾಮಿ ಭೀತಿ!
ಪಶ್ಚಿಮ ಜಪಾನ್‌ನಲ್ಲಿ ಹೊಸ ವರ್ಷದ ದಿನವೇ ಭಾರೀ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 7.4 ತೀವ್ರತೆ ದಾಖಲಾಗಿದ್ದು, ಭೀತಿಗೆ ಕಾರಣವಾಗಿದೆ. ಕರಾವಳಿ ಭಾಗದಲ್ಲಿ ಭೂಮಿ ಕಂಪಿಸಿರುವುದರಿಂದ ಭಾರೀ ಸಾವು, ನೋವುಗಳ ಆತಂಕ ಎದುರಾಗಿದೆ. ಇನ್ನೊಂದೆಡೆ ಸುನಾಮಿ ಏಳುವ ಎಚ್ಚರಿಕೆಯನ್ನೂ ಅಧಿಕಾರಿಗಳು ನೀಡಿದ್ದಾರೆ. ಹೀಗಾಗಿ ಕರಾವಳಿ ಭಾಗದ ನಿವಾಸಿಗಳು ಜೀವ ಅಂಗೈಲಿಡಿದುಕೊಂಡು ಜೀವನ ನಡೆಸಬೇಕಾದ ಪರಿಸ್ಥಿತಿ ಬಂದಿದೆ.
ಜಪಾನ್ ಹವಾಮಾನ ಸಂಸ್ಥೆ (ಜೆಎಂಎ) ಈ ಬಗ್ಗೆ ಮಾಹಿತಿ ನೀಡಿದೆ. ಇಶಿಕಾವಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೂಮಿ ಕಂಪಿಸಿದ್ದು, ಹಲವು ಕಟ್ಟಡಗಳು ಬಿರುಕು ಬಿಟ್ಟಿವೆ. ಆದ್ರೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಟೋಕಿಯೋ, ಕಾಂಟೋ ನಗರಗಳಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ.
ಈ ಹಿನ್ನೆಲೆಯಲ್ಲಿ ಸುನಾಮಿ ಏಳುವ ಎಲ್ಲಾ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಕರಾವಳಿ ಪ್ರದೇಶದಲ್ಲಿ ವಾಸಿಸುವವರು ಕೂಡಲೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಲಾಗಿದೆ. ದೊಡ್ಡ ದೊಡ್ಡ ಕಟ್ಟಡಗಳಲ್ಲಿ ವಾಸಿಸುವ ಜನರು ಕೂಡಾ ಹೊರಬಂದು ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಡಂಗುರ ಸಾರಿಸಲಾಗಿದೆ.