CrimeDistrictsUncategorized

ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ; ಮಹಿಳೆ ಅರೆಬೆತ್ತಲೆಗೊಳಿಸಿ ಹಲ್ಲೆ

ಬೆಳಗಾವಿ; ವಂಟಮೂರಿ ಗ್ರಾಮದಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಲಾಗಿತ್ತು. ಈ ಪ್ರಕರಣ ಮಾಸುವ ಮುನ್ನವೇ ಅದೇ ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿರುವ ಬಗ್ಗೆ ಆರೋಪ ಕೇಳಿಬಂದಿದೆ. ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ಮಹಿಳೆಯೊಬ್ಬರನ್ನು ಅರೆಬೆತ್ತಲೆ ಮಾಡಿ ಹಲ್ಲೆ ನಡೆಸಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಸದಸ್ಯರ ವಿರುದ್ಧ ಈ ಆರೋಪ ಮಾಡಲಾಗಿದ್ದು, ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಎಸ್​​ಪಿ ಸೂಚನೆ ಮೇರೆಗೆ ಜಿಲ್ಲಾ ಮಹಿಳಾ ಪೊಲೀಸ್​ ಠಾಣೆಯಲ್ಲಿ ಆರೋಪಿಗಳಾದ ಕಲ್ಲಪ್ಪ ಡೊಂಕನ್ನವರ್, ಅಡಿವೆಪ್ಪ ದಳವಾಯಿ, ಕಲ್ಪನಾ ಡೊಂಕನ್ನವರ್, ಸಾಧಿಕ್, ಇಸ್ಮಾಯಿಲ್ ಸೇರಿದಂತೆ 20 ಜನರ ವಿರುದ್ಧ ಐಪಿಸಿ ಸೆಕ್ಷನ್​​ 1860ರಡಿ 143, 147, 354(a), 354(b), 323, 324, 384, 201, 427, 342, 307, 504, 505, 149ರಡಿ ದೂರು ದಾಖಲಾಗಿದೆ.

ಮಹಿಳೆಯ ಜಮೀನಿನಲ್ಲಿ ಪೈಪ್​​ಲೈನ್ ಹಾದುಹೋಗಿದೆ. ಇದು ಒಡೆದಿದ್ರಿಂದ ಬೆಳೆಹಾನಿಯಾಗುತ್ತಿದೆ. ಹೀಗಾಗಿ ಪೈಪ್‌ಲೈನ್‌ ತೆರವು ಮಾಡುವಂತೆ ಮಹಿಳೆ ಗ್ರಾಮ ಪಂಚಾಯತ್‌ ಅಧ್ಯಕ್ಷರಿಗೆ ದೂರು ಕೊಟ್ಟಿದ್ದರು. ಈ ಸಂಬಂಧ ವಾಗ್ವಾದ ನಡೆದಿದ್ದು, ಈ ವೇಳೆ ಮಹಿಳೆ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

 

Share Post