ಶ್ರೀಕಾಂತ್ ಪೂಜಾರಿಗೆ ಜಾಮೀನು ಮಂಜೂರು
ಬೆಂಗಳೂರು; 31 ವರ್ಷಗಳ ಹಿಂದಿನ ಗಲಭೆ ಕೇಸ್‌ನಲ್ಲಿ ಬಂಧಿತನಾಗಿದ್ದ ಹುಬ್ಬಳ್ಳಿಯ ಶ್ರೀಕಾಂತ್ ಪೂಜಾರಿಗೆ ಜಾಮೀನು ಮಂಜೂರಾಗಿದೆ. ಹುಬ್ಬಳ್ಳಿಯ ಒಂದನೇ ಹೆಚ್ಚುವರಿ ಕೋರ್ಟ್ ಶ್ರೀಕಾಂತ್ ಪೂಜಾರಿಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ.
1992ರಲ್ಲಿ ಅಯೋಧ್ಯೆ ವಿಚಾರಕ್ಕಾಗಿ ನಡೆದ ಹೋರಾಟದ ವೇಳೆ ಹುಬ್ಬಳ್ಳಿಯಲ್ಲಿ ಗಲಭೆಯಾಗಿತ್ತು. ಈ ಗಲಭೆ ಸಂಬಂಧ 31 ವರ್ಷಗಳ ನಂತರ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಲಾಗಿತ್ತು. ಇದರ ವಿರುದ್ಧ ಬಿಜೆಪಿ ನಾಯಕರು ನಾಲ್ಕೈದು ದಿನದಿಂದ ನಿರಂತರ ಪ್ರತಿಭಟನೆ ನಡೆಸುತ್ತಾ ಬಂದಿದ್ದರು. ಜೊತೆಗೆ ಕಾನೂನು ಹೋರಾಟವೂ ನಡೆದಿತ್ತು. ಇಂದು ಕೋರ್ಟ್ ಶ್ರೀಕಾಂತ್ ಪೂಜಾರಿಗೆ ಜಾಮೀನು ನೀಡಿದೆ.