BengaluruPolitics

ಪುನೀತ್ ಕೆರೆಹಳ್ಳಿ ವಿರುದ್ಧ ಕಾಂಗ್ರೆಸ್ ದೂರು ದಾಖಲು

ಬೆಂಗಳೂರು; ರಾಷ್ಟ್ರ ರಕ್ಷಣಾ ಪಡೆ ಮುಖ್ಯಸ್ಥ ಪುನೀತ್ ಕೆರೆಹಳ್ಳಿ ವಿರುದ್ಧ ಕಾಂಗ್ರೆಸ್ ದೂರು ದಾಖಲಿಸಿದೆ. ರಾಷ್ಟ್ರ ರಕ್ಷಣಾ ಪಡೆ ವಾಟ್ಸ್ ಆಪ್ ಗ್ರೂಪ್ ನಲ್ಲಿ ಕೋಮು ಗಲಭೆ ಸೃಷ್ಟಿಸುವ ಸಂದೇಶ ರವಾನೆಯಾಗಿದ್ದು, ಪುನೀತ್ ಕೆರೆಹಳ್ಳಿಯನ್ನು ಬಂಧಿಸಬೇಕು ಎಂದು ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗ ಆಗ್ರಹಿಸಿದೆ.

  ಲೋಕಸಭಾ ಚುನಾವಣೆ ಹತ್ತಿರವಾಗುತ್ತಿರುವ ಸಂದರ್ಭದಲ್ಲಿ ರಾಜ್ಯದಲ್ಲಿ ಕೋಮು ಗಲಭೆ ಸೃಷ್ಟಿಸುವ ಪ್ರಯತ್ನ ನಡೆದಿದೆ. ಈ ಬಗ್ಗೆ ರಾಷ್ಟ್ರ ರಕ್ಷಣಾ ಪಡೆ ವಾಟ್ಸಾಪ್ ಗ್ರೂಪ್ ನಲ್ಲಿ ಚರ್ಚೆ ನಡೆದಿದೆ. ಈ ಸಂದೇಶ ಎಲ್ಲೆಡೆ ಹರಿದಾಡುತ್ತಿದೆ.

ಸಂದೇಶದಲ್ಲಿ ಏನಿದೆ..?

ಕರ್ನಾಟಕದಲ್ಲಿ ಕೋಮುಗಲಭೆ ಎಬ್ಬಿಸೋದಕ್ಕೆ ಬಿಜೆಪಿ ಬೆಂಬಲ ಕೊಟ್ಟಿದೆ. ಆದುದರಿಂದ ಎಲ್ಲಾ ಕಾರ್ಯಕರ್ತರು ರೆಡಿಯಾಗಿ ಇರಿ. ಎಲ್ಲಿ ಏನು ಮಾಡಬೇಕು ಅಂತ ಈ ಗ್ರೂಪಿನ ಮೂಲಕ ಮಾಹಿತಿ ಕೊಡುತ್ತೇವೆ. ಜೈ ರಾಷ್ಟ್ರ ರಕ್ಷಣಾ ಪಡೆ 2024ಕ್ಕೆ ಮತ್ತೊಮ್ಮೆ ಮೋದಿ.

  ಈ ರೀತಿಯ ಸಂದೇಶ ಸ್ಕ್ರೀನ್ ಶಾಟ್ ಹರಿದಾಡುತ್ತಿದೆ. ಇದೆ ವಿರುದ್ಧ ಕಾಂಗ್ರೆಸ್ ದೂರು ಕೊಟ್ಟಿದೆ.

 

Share Post