BengaluruPolitics

440 ಕೋಟಿ ರೂಪಾಯಿ ಸಾಲ ಬಾಕಿ; ರಮೇಶ್ ಜಾರಕಿಹೊಳಿ ವಿರುದ್ಧ ಕೇಸ್

ಬೆಂಗಳೂರು; ಅಪೆಕ್ಸ್ ಬ್ಯಾಂಕ್ ನಲ್ಲಿ ಸಾಲ ಪಡೆದು ವಾಪಸ್ ಕಟ್ಟದ ಆರೋಪದ ಮೇಲೆ ಮಾಜಿ ಸಚಿವ ರಮೇಶ ಜಾರಕಿಹೊಳಿ ವಿರುದ್ಧ ಕೇಸ್ ದಾಖಲಾಗಿದೆ.

ಬ್ಯಾಂಕ್ ಮ್ಯಾನೇಜರ್ ರಾಜಣ್ಣ ಈ ಬಗ್ಗರ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 420 ಅಡಿ ಕೇಸ್ ದಾಖಲು ಮಾಡಲಾಗಿದೆ. ಈ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ಎ೧ ಆರೋಪಿಯಾಗಿದ್ದಾರೆ.

ಚಾಮರಾಜಪೇಟೆಯ ಕರ್ನಾಟಕ ರಾಜ್ಯ ಸಹಕಾರಿ ಅಪೇಕ್ಸ್ ಬ್ಯಾಂಕ್​ನಿಂದ 2013 ರಿಂದ 2017ರವರೆಗೆ 232 ಕೋಟಿ 88 ಲಕ್ಷ ರೂ.ಗಳ ಸಾಲ ಮಂಜೂರು ಮಾಡಲಾಗಿತ್ತು. ಇದನ್ನು ವಾಪಸ್ ಮಾಡದ ಹಿನ್ನೆಲೆಯಲ್ಲಿ 2023ರ ವೇಳೆಗೆ 439 ಕೋಟಿ 7 ಲಕ್ಷ ರೂ.ಗಳ ಸಾಲದ ಮೊತ್ತ ಬಾಕಿ ಉಳಿದುಕೊಂಡಿದೆ. ಈ ಹಿನ್ನೆಲೆಯಲ್ಲಿ ದೂರು ದಾಖಲಿಸಲಾಗಿದೆ.

Share Post