DistrictsEconomy

ಹುಂಡಿಯಲ್ಲಿ ಸಂಗ್ರಹವಾಗುವ ಹಣ ಆಯಾ ದೇಗುಲಕ್ಕೇ ಬಳಕೆ; ರಾಮಲಿಂಗಾರೆಡ್ಡಿ

ಧಾರವಾಡ; ಹುಂಡಿಯಲ್ಲಿ ಸಂಗ್ರಹವಾಗೋ ಕಾಣಿಕೆ ಹಣ ಆಯಾ ದೇವಸ್ಥಾನಕ್ಕೇ ಬಳಸಬೇಕು ಎಂದು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಧಾರವಾಡದ ನೂತನ ಸಿಬಿಟಿ ನಿಲ್ದಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ನಂತರ ಅವರು ಮಾತನಾಡಿದರು.

 ಶಕ್ತಿ ಯೋಜನೆಯಿಂದ ದೇವಸ್ಥಾನಗಳಿಗೆ ಬರುವ ಭಕ್ತರ ಸಂಖ್ಯೆ ದುಪ್ಪಟ್ಟಾಗಿದೆ.  ಇದರಿಂದಾಗಿ ದೇವಸ್ಥಾನಗಳಿಗೆ ಹುಂಡಿ ಕಾಣಿಕೆ ಹಣ ಹೆಚ್ಚಾಗಿ ಹರಿದುಬರುತ್ತಿದೆ. ಮುಜರಾಯಿ ಇಲಾಖೆ ಅಡಿಯಲ್ಲಿ 34 ಸಾವಿರ ದೇವಸ್ಥಾನಗಳಿದ್ದು, ಎಲ್ಲಾ ಕಡೆ ಹುಂಡಿಗೆ ಸಾಕಷ್ಟು ಹಣ ಬರುತ್ತಿದೆ. ಅದರೆ, ಒಂದು ದೇವಸ್ಥಾನದ ಹಣ ಮತ್ತೊಂದು ದೇವಸ್ಥಾನಕ್ಕೆ ಬಳಸುವುದಿಲ್ಲ. ಆಯಾ ದೇವಸ್ಥಾನದ ಹುಂಡಿ ಹಣ ಅದೇ ದೇವಸ್ಥಾನಕ್ಕೆ ಸೇರುತ್ತದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಶಕ್ತಿ ಯೋಜನೆಯಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಳ ವಿಚಾರವಾಗಿ ಮಾತನಾಡಿದ ಅವರು ಶಕ್ತಿ ಯೋಜನೆ ಜಾರಿ ಮುನ್ನ ಪ್ರತಿದಿನ ರಾಜ್ಯದಲ್ಲಿ 80 ಲಕ್ಷ ಜನ ಓಡಾಡುತ್ತಿದ್ದರು. ಇಂಥ ಸಮಯದಲ್ಲಿ ಶಕ್ತಿ ಯೋಜನೆ ಆರಂಭವಾಯ್ತು. ಇದರಿಂದ ನಿತ್ಯ ಓಡಾಡುವವರ ಸಂಖ್ಯೆ 1 ಕೋಟಿಗೂ ಮೇಲಾಗಿದೆ ಎಂದಿದ್ದಾರೆ.

Share Post