ಬೆಳ್ಳಂಬೆಳಗ್ಗೆ ಏಕಕಾಲದಲ್ಲಿ ಲೋಕಾಯುಕ್ತ ದಾಳಿ; 30 ಸ್ಥಳಗಳಲ್ಲಿ ದಾಖಲೆ ಪರಿಶೀಲನೆ!
ಬೆಂಗಳೂರು; ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಬಿಬಿಎಂಪಿ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿ ಮಾಡಲಾಗಿದೆ. ಬೆಂಗಳೂರು ನಗರದ ಹತ್ತು ಕಡೆ, ಬಳ್ಳಾರಿಯಲ್ಲಿ ಏಳು ಕಡೆ ದಾಳಿ ನಡೆಸಲಾಗಿದೆ. ಇದಲ್ಲದೆ ಮಂಡ್ಯ, ರಾಮನಗರ ಸೇರಿದಂತೆ ರಾಜ್ಯದ ಒಟ್ಟು 30 ಕಡೆಗಳಲ್ಲಿ ಈ ದಾಳಿ ನಡೆಸಲಾಗಿದೆ.
ಬೆಸ್ಕಾಂ ಕಚೇರಿಯಲ್ಲಿ ಚೀಫ್ ಜನರಲ್ ಮ್ಯಾನೇಜರ್ ಆಗಿದ್ದ ಎಂ.ಎಲ್. ನಾಗರಾಜ್ ಅವರಯ ಮನೆ, ಕಚೇರಿಗಳಲ್ಲಿ ದಾಖಲೆಗಳ ಪರಿಶೀಲನೆ ನಡೆದಿದೆ. ನಾಗರಾಜ್ ಅವರು ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದರು. ಹೀಗಾಗಿ ಒಂದೂವರೆ ತಿಂಗಳಿಂದ ಅವರು ಅಮಾನತಿನಲ್ಲಿದ್ದರು.
ನಾಗರಾಜ್‌ಗೆ ಸೇರಿದ ಬಳ್ಳಾರಿಯ ಏಳು ಸ್ಥಳಗಳಲ್ಲಿ ಪರಿಶೀಲನೆ ಮಾಡಲಾಗಿದೆ. ಅವರ ಹೆಸರಲ್ಲಿ 9 ಸೈಟ್‌ಗಳು, 3 ಪೆಟ್ರೋಲ್ ಬಂಕ್‌ಗಳು, 3 ಮನೆಗಳು, ಶಿಕ್ಷಣ ಸಂಸ್ಥೆಗಳು, ಕೃಷಿ ಜಮೀನು ಇರುವುದು ಪತ್ತೆಯಾಗಿದೆ.