ಅಂದರ್-ಬಾಹರ್ ಅಡ್ಡೆ ಮೇಲೆ ಸಿಸಿಬಿ ದಾಳಿ; 87 ಲಕ್ಷ ರೂಪಾಯಿ ನಗದು ಜಪ್ತಿ
ಬೆಂಗಳೂರು; ಅಕ್ರಮ ಜೂಜು ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ಭಾರಿ ಪ್ರಮಾಣದ ಹಣವನ್ನು ವಶಪಡಿಸಿಕೊಂಡಿದ್ದಾರೆ. ಸಿರ್ಸಿ ವೃತ್ತದ ಪಾರ್ಕ್ ಬಳಿಯ ವೆಸ್ಟ್ ಎಂಡ್ ಅಪಾರ್ಟ್ಮೆಂಟ್ನಲ್ಲಿ ಅಂದರ್ ಬಾಹರ್ ಜೂಜು ನಡೆಯುತ್ತಿತ್ತು. ಇದರ ಖಚಿತ ಮಾಹಿತಿ ಅರಿತು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
ದಾಳಿ ವೇಳೆ ಪಣಕ್ಕಿಟ್ಟಿದ್ದ ಒಂದು ಲಕ್ಷ ರೂಪಾಯಿ ಸೇರಿ ಒಟ್ಟು 86 ಲಕ್ಷದ 87, 800 ರೂಪಾಯಿಯನ್ನು ಜಪ್ತಿ ಮಾಡಲಾಗಿದೆ. ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಅಪಾರ್ಟ್ಮೆಂಟ್ನಲ್ಲಿ ಪರಿಶೀಲನೆ ನಡೆಸಿದಾಗ ಎರಡು ಬ್ಯಾಗ್ಗಳಲ್ಲಿ ತುಂಬಿಸಿಟ್ಟಿದ್ದ ಲಕ್ಷಾಂತರ ರೂಪಾಯಿ ಹಣ ಸಿಕ್ಕಿದೆ.
ಈ ಬಗ್ಗೆ ಜೆಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಹಣದ ಮೂಲದ ಬಗ್ಗೆ ಸಿಸಿಬಿ ಪೊಲೀಸರು ತೀವ್ರ ತನಿಖೆ ಆರಂಭಿಸಿದ್ದಾರೆ.