ಆಯೋಧ್ಯೆಯಲ್ಲಿ ತಲೆ ಎತ್ತಲಿದೆ ಕರ್ನಾಟಕ ಯಾತ್ರಿ ನಿವಾಸ; ಕರ್ನಾಟಕ ಸರ್ಕಾರದಿಂದ ತೀರ್ಮಾನ
ಬೆಂಗಳೂರು; ಜನವರಿ 22ರಂದು ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ನಡೆಯಲಿದೆ. ಇದಕ್ಕಾಗಿ ಆಯೋದ್ಯೆ ಸಜ್ಜಾಗುತ್ತಿದೆ. ಈ ಸಂದರ್ಭದಲ್ಲೇ ಕರ್ನಾಟಕ ಧಾರ್ಮಿಕ ದತ್ತಿ ಇಲಾಖೆ ಮಹತ್ವದ ತೀರ್ಮಾನ ಕೈಗೊಂಡಿದೆ. ರಾಮ ಭಕ್ತರಿಗೆ ಅನುಕೂಲವಂತೆ ಅಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿ ನಿವಾಸ ಕಟ್ಟೋದಕ್ಕೆ ತೀರ್ಮಾನ ಕೈಗೊಳ್ಳಲಾಗಿದೆ. ಅಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿ ನಿವಾಸ ಕಟ್ಟಲು ಅವಕಾಶ ನೀಡುವಂತೆ ರಾಜ್ಯ ಧಾರ್ಮಿಕ ದತ್ತಿ ಹಾಗೂ ಮುಜರಾಯಿ ಇಲಾಖೆ ಉತ್ತರ ಪ್ರದೇಶ ಸರ್ಕಾರಕ್ಕೆ ಪತ್ರ ಬರೆದಿದೆ.
ಕರ್ನಾಟದಿಂದ ರಾಮಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಅಯೋಧ್ಯೆಗೆ ಬರುತ್ತಾರೆ. ಹೀಗಾಗಿ ಅವರಿಗೆ ವಸತಿ, ಊಟದ ವ್ಯವಸ್ಥೆ ಒದಗಿಸಬೇಕಿದೆ. ಇದಕ್ಕಾಗಿ ಐದು ಎಕರೆ ಜಾಗದಲ್ಲಿ ಸುಮಾರು 10 ಕೋಟಿ ರೂಪಾಯಿ ವೆಚ್ಚದಲ್ಲಿ ರಾಜ್ಯದ ಭಕ್ತರ ಅನುಕೂಲಕ್ಕಾಗಿ ಅತಿಥಿಗೃಹ ನಿರ್ಮಾಣ ಮಾಡಲು ನಮ್ಮ ಸರ್ಕಾರ ಸಿದ್ಧವಿದೆ. ಇದಕ್ಕೆ ಅನುಮತಿ ನೀಡಬೇಕೆಂದು ಉತ್ತರ ಪ್ರದೇಶ ಸರ್ಕಾರ ರಾಜ್ಯ ಸರ್ಕಾರ ಮನವಿ ಮಾಡಿಕೊಂಡಿದೆ.
ಸರಯೂ ನದಿ ಸಮೀಪದಲ್ಲಿ ಅತಿಥಿ ಗೃಹ ನಿರ್ಮಾಣಕ್ಕೆ ಅವಕಾಶ ನೀಡನೇಕೆಂದು ಕೋರಲಾಗಿದೆ. ರಾಜ್ಯದ ಮನವಿಗೆ ಉತ್ತರ ಪ್ರದೇಶದ ಹೌಸಿಂಗ್ ಬೋರ್ಡ್ ಕೂಡಾ ಸ್ಪಂದಿಸಿದೆ ಎಂದು ತಿಳಿದುಬಂದಿದೆ.