ಫೆಬ್ರವರಿ 1ಕ್ಕೆ ಕೇಂದ್ರ ಬಜೆಟ್; ಪ್ರಮುಖ 5 ಕ್ಷೇತ್ರಗಳ ಮೇಲೆ ಗಮನ
ನವದೆಹಲಿ; ಫೆಬ್ರವರಿ 1ರಂದು 2024-25ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗಲಿದೆ. ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾಗುವುದರಿಂದ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡೇ ಈ ಬಜೆಟ್ ಮಂಡನೆಯಾಗಲಿದೆ ಎಂದು ಹೇಳಲಾಗುತ್ತಿದೆ. ಈ ಬಾರಿಯ ಬಜೆಟ್ನಲ್ಲಿ ಮಹಿಳೆಯರು, ಬಡವರು, ಯುವಕರು, ರೈತರು ಮತ್ತು ಬುಡಕಟ್ಟು ಜನಾಂಗದ ಕಲ್ಯಾಣ ಯೋಜನೆ. ಈ ಐದು ಯೋಜನೆಗಳ ಮೇಲೆಯೇ ಹೆಚ್ಚು ಆಸಕ್ತಿ ವಹಿಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಮೂರು ವರ್ಷಗಳಿಂದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಾಗದ ರಹಿತ ಬಜೆಟ್ ಅನ್ನು ಮಂಡನೆ ಮಾಡುತ್ತಾ ಬಂದಿದ್ದಾರೆ. ಈ ಬಾರಿ ಕೂಡಾ ಪೇಪರ್ಲೆಸ್ ಬಜೆಟ್ ಮಂಡನೆಯಾಗಲಿದೆ. ಇದು ಚುನಾವಣಾ ಪೂರ್ವ ಬಜೆಟ್ ಆಗಿದ್ದು, ಚುನಾವಣೆ ನಂತರ ಬರುವ ಹೊಸ ಸರ್ಕಾರದಿಂದ ಮತ್ತೆ ಹೊಸದಾಗಿ ಬಜೆಟ್ ಮಂಡಿಸಲಾಗುತ್ತದೆ.