BengaluruPolitics

ಸಿಎಂ, ಡಿಸಿಎಂ ಪರ ನಿಲ್ಲಲು ಶಾಸಕರು, ಸಚಿವರಿಗೆ ಹೈಕಮಾಂಡ್‌ ಸೂಚನೆ

ಬೆಂಗಳೂರು; ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದೆ. ರಾಜ್ಯದಲ್ಲಿ ಈಗಾಗಲೇ ರಾಜಕೀಯ ಕೆಸರೆರಚಾಟ ಶುರುವಾಗಿದೆ. ಹಲವು ವಿಷಯಗಳನ್ನು ಮುಂದಿಟ್ಟುಕೊಂಡು ವಿಪಕ್ಷಗಳ ನಾಯಕರು ಸರ್ಕಾರದ ವಿರುದ್ಧ ಮುಗಿ ಬೀಳುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಆದ್ರೆ ಕಾಂಗ್ರೆಸ್‌ನ ಶಾಸಕರು, ಸಚಿವರು ಇದಕ್ಕೆ ತಕ್ಕ ಉತ್ತರ ಕೊಡುತ್ತಿಲ್ಲ. ಈ ವಿಚಾರ ಹೈಕಮಾಂಡ್‌ ಕಿವಿಗೆ ಬಿದ್ದಿದೆ. ಹೀಗಾಗಿ ಹೈಕಮಾಂಡ್‌, ಶಾಸಕರು ಹಾಗೂ ಸಚಿವರಿಗೆ ವಾರ್ನಿಂಗ್‌ ಕೊಟ್ಟಿದೆ.

ಶಾಸಕರು ಹಾಗೂ ಸಚಿವರು ಸಿಎಂ ಹಾಗೂ ಡಿಸಿಎಂ ಅವರ ಬೆಂಬಲಕ್ಕೆ ನಿಲ್ಲಬೇಕು. ಸಂಸದ ಅನಂತಕುಮಾರ್‌ ಹೆಗಡೆ ಏಕವಚನದಲ್ಲಿ ಮಾತನಾಡಿದರೂ ಯಾಕೆ ಸುಮ್ಮನಿದ್ದೀರಿ. ನೀವು ಕೂಡಾ ತಕ್ಕ ಉತ್ತರ ಕೊಡಬೇಕು. ವಿರೋಧ ಪಕ್ಷಗಳ ತಂತ್ರಗಾರಿಕೆಗಳಿಗೆ ನಮ್ಮ ಶಾಸಕರು, ಸಚಿವರು ಕೂಡಾ ಕೌಂಟರ್‌ ಕೊಡಬೇಕು ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸೂಚನೆ ಕೊಟ್ಟಿದೆ ಎನ್ನಲಾಗಿದೆ.

ಸಿಎಂ ಹಾಗೂ ಡಿಸಿಎಂ ಅವರನ್ನು ಸಮರ್ಥನೆ ಮಾಡಿಕೊಳ್ಳಬೇಕು, ನಮ್ಮ ಸರ್ಕಾರದ ಸಾಧನೆಗಳನ್ನು ಪ್ರಚಾರ ಮಾಡಬೇಕು, ಕೇಂದ್ರ ಸರ್ಕಾರದ ವೈಫಲ್ಯಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು ಎಂದೂ ಕಾಂಗ್ರೆಸ್‌ ಹೈಕಮಾಂಡ್‌ ಸೂಚನೆ ಕೊಟ್ಟಿದೆ.

 

Share Post