NationalPolitics

ಆಂಧ್ರಪ್ರದೇಶ ಕಾಂಗ್ರೆಸ್‌ ಅಧ್ಯಕ್ಷೆಯಾಗಿ ವೈ.ಎಸ್‌.ಶರ್ಮಿಳಾ ನೇಮಕ

ಹೈದರಾಬಾದ್‌; ಮೊನ್ನೆಯಷ್ಟೇ ವೈಎಸ್‌ಆರ್‌ ತೆಲಂಗಾಣ ಪಾರ್ಟಿಯನ್ನು ಕಾಂಗ್ರೆಸ್‌ ಜೊತೆ ವಿಲೀನ ಮಾಡಿ, ಕಾಂಗ್ರೆಸ್‌ ಪಕ್ಷಕ್ಕೆ ಸೇರಿದ್ದ ವೈಎಸ್‌ ರಾಜಶೇಖರರೆಡ್ಡಿ ಪುತ್ರಿ ಶರ್ಮಿಳಾ ಅವರನ್ನು ಆಂಧ್ರ ಪ್ರದೇಶ ಕಾಂಗ್ರೆಸ್‌ ಕಮಿಟಿ ಅಧ್ಯಕ್ಷೆಯಾಗಿ ನೇಮಕ ಮಾಡಲಾಗಿದೆ.

ಶರ್ಮಿಳಾ ಕಾಂಗ್ರೆಸ್‌ ಸೇರ್ಪಡೆಯಾದ ಮೇಲೆ ಆಂಧ್ರಪ್ರದೇಶ ಕಾಂಗ್ರೆಸ್‌ ಕಮಿಟಿ ಅಧ್ಯಕ್ಷರಾಗಿದ್ದ ಗಿಡುಗು ರುದ್ರರಾಜು ಎರಡು ದಿನಗಳ ಹಿಂದಷ್ಟೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಶರ್ಮಿಳಾ ಅವರಿಗೆ ಸ್ಥಾನ ಬಿಟ್ಟುಕೊಡಲೆಂದೇ ಈ ರಾಜೀನಾಮೆ ನೀಡಲಾಗಿದೆ ಎಂದು ಹೇಳಲಾಗಿತ್ತು.ಇದೀಗ ಆ ಸುದ್ದಿ ನಿಜವಾಗಿದೆ. ಶರ್ಮಿಳಾ ಅವರನ್ನು ಆಂಧ್ರ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷೆಯಾಗಿ ನೇಮಕ ಮಾಡಿ ಎಐಸಿಸಿ ಅಧಿಕೃತ ಆದೇಶ ಹೊರಡಿಸಿದೆ.

ಇನ್ನು ಸ್ಥಾನ ಬಿಟ್ಟುಕೊಟ್ಟ ಗಿಡುಗ ರುದ್ರ ರಾಜು ಕಾಂಗ್ರೆಸ್‌ ವರ್ಕಿಂಗ್‌ ಕಮಿಟಿ ವಿಶೇಷ ಆಹ್ವಾನಿತರಾಗಿ ನೇಮಿಸಲಾಗಿದೆ. ಇನ್ನು ಮೂರು ತಿಂಗಳಲ್ಲಿ ಆಂಧ್ರಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಶರ್ಮಿಳಾ ಅವರು ತಮ್ಮ ಸಹೋದರ, ಆಂಧ್ರ ಸಿಎಂ ಜಗನ್‌ಮೋಹನ್‌ ರೆಡ್ಡಿ ವಿರುದ್ಧವಿದ್ದಾರೆ. ಆಸ್ತಿ ವಿಚಾರದಲ್ಲಿ ಇಬ್ಬರಿಗೂ ಜಗಳವಾಗಿದೆ. ಇದನ್ನೇ ಬಂಡವಾಳ ಮಾಡಿಕೊಂಡ ಕಾಂಗ್ರೆಸ್‌, ಸಹೋದರ ಜಗನ್‌ ಮೋಹನ್‌ ರೆಡ್ಡಿ ವಿರುದ್ಧ ಸೆಣಸಲು ಶರ್ಮಿಳಾ ಅವರನ್ನು ಛೂಬಿಡಲಾಗಿದೆ. ಇದು ಕಾಂಗ್ರೆಸ್‌ಗೆ ಯಾವ ರೀತಿಯಲ್ಲಿ ಅನುಕೂಲವಾಗುತ್ತೋ ನೋಡಬೇಕು.

Share Post