ಮಹಿಳೆ ಮೇಲೆ ಗ್ಯಾಂಗ್ರೇಪ್; ಅತ್ಯಾಚಾರಿಗಳ ಪರ ನಿಂತ ಸರ್ಕಾರ – ಬೊಮ್ಮಾಯಿ ಆಕ್ರೋಶ
ಹಾವೇರಿ; ನೈತಿಕ ಪೊಲೀಸ್ಗಿರಿ ಹೆಸರಿನಲ್ಲಿ ಮಹಿಳೆಯ ಮೇಲೆ ಗ್ಯಾಂಗ್ ರೇಪ್ ಮಾಡಲಾಗಿದ್ದು, ಹಾನಗಲ್ನಲ್ಲಿ ನಡೆದ ಈ ಪ್ರಕರಣ ಆರೋಪಿಗಳನ್ನು ರಾಜ್ಯ ಸರ್ಕಾರ ರಕ್ಷಣೆ ಮಾಡಲು ಹೊರಟಿದೆ. ಅವರ ಪರ ಸರ್ಕಾರವೇ ನಿಂತಿದೆ.ಪ್ರಕರಣವನ್ನು SIT ತನಿಖೆಗೆ ಕೊಡಿ ಎಂದು ನಾವು ಆಗ್ರಹಿಸುತ್ತಿದ್ದೇವೆ. ಆದ್ರೆ ಸರ್ಕಾರ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಕ್ರೋಶ ಹೊರಹಾಕಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಅತ್ಯಾಚಾರಿಗಳ ಪರ ನಿಂತಂತೆ ಕಾಣುತ್ತಿದೆ. ಹಾನಗಲ್ನಲ್ಲಿ ಗ್ಯಾಂಗ್ ರೇಪ್ ಆದರೂ, ಸರ್ಕಾರ ಹೆಚ್ಚು ತಲೆಕೆಡಿಸಿಕೊಂಡಿಲ್ಲ. ತನಿಖೆಗೆ ವಿಶೇಷ ತನಿಖಾ ತಂಡ ರಚನೆ ಮಾಡದೇ ಸರ್ಕಾರ ಆರೋಪಿಗಳ ಪರವಾಗಿ ನಿಂತಿದೆ ಎಂದು ಬೊಮ್ಮಾಯಿ ಆರೋಪ ಮಾಡಿದ್ದಾರೆ.
ಪ್ರಕರಣದಲ್ಲಿ ಸುಳ್ಳು ಮೆಡಿಕಲ್ ಎಕ್ಸಾಮಿನ್ ಆಗಿದೆ. ಇದು ಮೆಡಿಕೋ ಲೀಗಲ್ ಕೇಸ್, ಸರ್ಕಾರ ಸಂತ್ರಸ್ತೆ ಬಗ್ಗೆ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದೂ ಅವರು ಆಗ್ರಹಿಸಿದ್ದಾರೆ.