ನಾಳೆ ಸರ್ಕಾರಿ ರಜೆ ಇಲ್ಲ; ಸಿದ್ದರಾಮಯ್ಯ ಸ್ಪಷ್ಟನೆ
ತಮಕೂರು; ನಾಳೆ ಅಯೊಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿಬಹುತೇಕ ರಾಜ್ಯಗಳಲ್ಲಿ ರಜೆ ಘೋಷಿಸಲಾಗಿದೆ. ಆದ್ರೆ ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ತಮ್ಮ ಸ್ಪಷ್ಟ ನಿಲುವು ಪ್ರಕಟಿಸಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ನಾಳೆ ಮುಜರಾಯಿ ದೇಗುಲಗಳಲ್ಲಿ ವಿಶೇಷ ಪೂಜೆ ನಡೆಯುತ್ತೆ. ಆದ್ರೆ, ಸರ್ಕಾರಿ ರಜೆ ಇಲ್ಲ. ನಾಳೆ ಮುಜರಾಯಿ ದೇಗುಲಗಳಲ್ಲಿ ದಾಸೋಹ, ಪಾನಕ-ಫಲಹಾರ ವ್ಯವಸ್ಥೆ ಬಗ್ಗೆ ನನಗೆ ಮಾಹಿತಿ ಇಲ್ಲ. ನಾಳೆ ಮಹದೇವಪುರದಲ್ಲಿ ರಾಮನ ದೇವಸ್ಥಾನ ಉದ್ಘಾಟನೆ ಮಾಡುತ್ತಿದ್ದೇನೆ. ಕಾರ್ಯಕ್ರಮಕ್ಕೆ ನನಗೆ ಆಹ್ವಾನ ನೀಡಿದ್ದಾರೆ. ಹೀಗಾಗಿ ದೇಗುಲ ಉದ್ಘಾಟಿಸುತ್ತೇನೆ ಎಂದು ಹೇಳಿದರು.