ಅಕ್ರಮ ಪಿಎಸ್ಐ ನೇಮಕಾತಿ ತನಿಖಾ ವರದಿ ಸದನದಲ್ಲಿ ಮಂಡಿಸಲು ಚಿಂತನೆ
ಬೆಂಗಳೂರು; ಕಳೆದ ಬಿಜೆಪಿ ಸರ್ಕಾರದ ವೇಳೆ ನಡೆದಿದ್ದ ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ತನಿಖಾ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ಈ ವರದಿಯನ್ನು ಜಂಟಿ ಅಧಿವೇಶನದಲ್ಲಿ ಮಂಡಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ ವೀರಪ್ಪ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಸೋಮವಾರ ಈ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿತ್ತು.
ಸಮಿತಿ ಒಟ್ಟು 470ಕ್ಕೂ ಹೆಚ್ಚು ಪುಟಗಳ ವರದಿ ಸಲ್ಲಿಸಿದೆ. ನೇಮಕಾತಿ ಪರೀಕ್ಷೆ ವೇಳೆ ಆಗಿರುವ ಲೋಪಗಳ ಬಗ್ಗೆ ವಿವರವಾಗಿ ಉಲ್ಲೇಖಿಸಲಾಗಿದೆ. ಪ್ರಕರಣದಲ್ಲಿ ಹಲವು ರಾಜಕಾರಣಿಗಳು ಭಾಗಿಯಾಗಿದ್ದಾರೆಂಬ ಆರೋಪವನ್ನೂ ಮಾಡಲಾಗಿದೆ. ನೋಟಿಸ್ ನೀಡಿದ್ದರೂ ಕೆಲವು ಪ್ರಭಾವಿಗಳು ಗೈರಾದ ಬಗ್ಗೆಯೂ ಉಲ್ಲೇಖಿಸಲಾಗಿದೆ.
545 ಪಿಎಸ್ಐ ಹುದ್ದೆಗಳ ಭರ್ತಿಗಾಗಿ ಕಳೆದ ವರ್ಷದ ಅಕ್ಟೋಬರ್ 3 ರಂದು ಬೆಂಗಳೂರು ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿನ 93 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆದಿತ್ತು. ಈ ವೇಳೆ ಅಕ್ರಮ ನಡೆದಿತ್ತು.