BengaluruCrime

29ನೇ ಮಹಡಿಯಿಂದ ಬಿದ್ದು 12 ವರ್ಷದ ಬಾಲಕಿ ಆತ್ಮಹತ್ಯೆ!

ಬೆಂಗಳೂರು; 12 ವರ್ಷದ ಬಾಲಕಿಯೊಬ್ಬಳು ಅಪಾರ್ಟ್‌ಮೆಂಟ್‌ನ 29ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬೇಗೂರಿನ ಬಳಿ ಇರುವ ಅಪಾರ್ಟ್‌ಮೆಂಟ್‌ನಲ್ಲಿ ಈ ಘಟನೆ ನಡೆದಿದೆ. ಬಾಲಕಿಯ ತಂದೆ ಸಾಫ್ಟ್‌ವೇರ್‌ ಎಂಜಿನಿಯರ್‌ ಆಗಿದ್ದು, ತಾಯಿ ಗೃಹಿಣಿ ಎಂದು ತಿಳಿದುಬಂದಿದೆ. ಖಾಸಗಿ ಶಾಲೆಯಲ್ಲಿ 6 ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು ಅನ್ನೋದು ಇನ್ನೂ ಗೊತ್ತಾಗಿಲ್ಲ. 

ಮಂಗಳವಾರ ಮುಂಜಾನೆ 4.30ರ ಸಮಯದಲ್ಲಿ ಎದ್ದಿದ್ದ ಬಾಲಕಿ ಹಾಲ್‌ಗೆ ಬಂದು ಕುಳಿತಿದ್ದಳು. ಇದನ್ನು ನೋಡಿದ ತಾಯಿ ಯಾಕೆ ಎಂದು ವಿಚಾರಿಸಿದ್ದಾರೆ. ಈ ವೇಳೆ ಆಕೆ ಸರಿಯಾಗಿ ಉತ್ತರ ನೀಡಿಲ್ಲ. ಬದಲಾಗಿ ಮಲಗುತ್ತೇನೆ ಎಂದು ರೂಮಿಗೆ ತೆರಳಿದ್ದಾಳೆ. ಅನಂತರ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಮತ್ತೆ ಆಕೆ, 29ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಜೋರಾಗಿ ಶಬ್ದವಾಗಿದ್ದು ನೋಡಿ ಸೆಕ್ಯೂರಿಟಿ ಬಂದು ನೋಡಿದ್ದಾರೆ. ಈ ವೇಳೆ ಬಾಲಕಿ ಕೆಳಗೆ ಬಿದ್ದು ಸಾವನ್ನಪ್ಪಿರುವುದು ಕಂಡುಬಂದಿದೆ. ಹುಳಿಮಾವು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Share Post