ಕಾಂಗ್ರೆಸ್ ಪಕ್ಷಕ್ಕಾಗಿ ದೇಣಿಗೆ ಸಂಗ್ರಹ; ಕರ್ನಾಟಕದ ಕೊಡುಗೆಯೇ ಅತಿ ಕಡಿಮೆ!
ಬೆಂಗಳೂರು; ಕಾಂಗ್ರೆಸ್ ಪಕ್ಷ ಪಕ್ಷಕ್ಕಾಗಿ ದೇಣಿಗೆ ಸಂಗ್ರಹಕ್ಕೆ ಮುಂದಾಗಿತ್ತು. ಕ್ರೌಡ್ ಫಂಡಿಂಗ್ ಮೂಲಕ ಸಾರ್ವಜನಿಕರಿಂದ ದೇಣಿಗೆ ಸಂಗ್ರಹ ಮಾಡುತ್ತಿದೆ. ಆದ್ರೆ ಇದಕ್ಕೆ ಹೆಚ್ಚುನ ಪ್ರತಿಕ್ರಿಯೆ ಸಿಕ್ಕಿಲ್ಲ. ಕಾಂಗ್ರೆಸ್ ಆಡಳಿತವಿರುವ ಕರ್ನಾಟಕ ರಾಜ್ಯದಲ್ಲಿ ಕೂಡಾ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ದೇಣಿಗೆ ಸಿಕ್ಕಿಲ್ಲ. ಕರ್ನಾಟಕದಲ್ಲಿ ಕೇವಲ 11 ಮಂದಿ ಮಾತ್ರ 1 ಲಕ್ಷಕ್ಕಿಂತ ಹೆಚ್ಚಿನ ದೇಣಿಗೆ ನೀಡಿದ್ದಾರೆ. ಇದನ್ನು ಕಾಂಗ್ರೆಸ್ ಖಜಾಂಚಿ ಅಜಯ್ ಮಾಕೇನ್ ಅವರೇ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.
ಮಾಕೇನ್ ಅವರು 1 ಲಕ್ಷ ರೂಪಾಯಿಗಿಂತ ಹೆಚ್ಚು ದೇಣಿಗೆ ನೀಡಿದವರ ರಾಜ್ಯವಾರು ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ರಾಜಸ್ಥಾನ ಮೊದಲ ಸ್ಥಾನದಲ್ಲಿದ್ದರೆ, ಕರ್ನಾಟಕ 11ನೇ ಸ್ಥಾನದಲ್ಲಿದೆ. ರಾಜಸ್ಥಾನದಲ್ಲಿ 181 ಮಂದಿ ದಾನಿಗಳು 1 ಲಕ್ಷ ರೂಪಾಯಿಗೂ ಹೆಚ್ಚಿನ ದೇಣಿಗೆಯನ್ನು ನೀಡಿದ್ದಾರೆ. ಹರಿಯಾಣದಲ್ಲಿ 73 ಮಂದಿ ದಾನಿಗಳು, ಕರ್ನಾಟಕದಲ್ಲಿ ಕೇವಲ 11 ಮಂದಿ ಮಾತ್ರ 1 ಲಕ್ಷ ರೂಪಾಯಿಗೂ ಹೆಚ್ಚು ದೇಣಿಗೆ ನೀಡಿದ್ದಾರೆ.
ಈ ಅಭಿಯಾನದಡಿ ಇದುವರೆಗೆ ಕೇವಲ 16 ಕೋಟಿ ರೂಪಾಯಿ ಸಂಗ್ರಹವಾಗಿದೆ. ಸುಮಾರು 3 ಲಕ್ಷ ಮಂದಿ ಈ ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ ಎಂದು ಅಜಯ್ ಮಾಕೇನ್ ತಿಳಿಸಿದ್ದಾರೆ.