Politics

EXCLUSIVE; ರಿವರ್ಸ್‌ ಆಪರೇಷನ್‌ ಸಕ್ಸಸ್‌; ಜಗದೀಶ್‌ ಶೆಟ್ಟರ್‌ ಮರಳಿ ಬಿಜೆಪಿ ಗೂಡಿಗೆ!

ನವದೆಹಲಿ; ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಮತ್ತೆ ಬಿಜೆಪಿ ಸೇರ್ಪಡೆಯಾಗಿದ್ದಾರೆ. ದೆಹಲಿಯ ಬಿಜೆಪಿಯ ಕೇಂದ್ರ ಕಚೇರಿಯಲ್ಲಿ ಅವರು ಬಿಜೆಪಿಗೆ ಸೇರಿದ್ದಾರೆ. ಇದಕ್ಕೂ ಮೊದಲು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಕೂಡಾ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. 

ಈ ಸಂದರ್ಭದಲ್ಲಿ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕೂಡಾ ಹಾಜರಿದ್ದರು.  ಇದಕ್ಕೂ ಮುಂಚೆ ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರು ಕೂಡಾ ಅಮಿತ್‌ ಷಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.

ಬಿಜೆಪಿ ಸೇರ್ಪಡೆಗೂ ಮೊದಲು ಫ್ಯಾಕ್ಸ್‌ ಮೂಲಕ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ. ನಂತರ ಬೆಂಗಳೂರಿಗೆ ಬಂದ ಮೇಲೆ ಖುದ್ದಾಗಿ ರಾಜೀನಾಮೆ ನೀಡುತ್ತಾರೆ ಎಂದು ಹೇಳಲಾಗಿದೆ. ಇನ್ನೊಂದೆಡೆ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡುವುದಕ್ಕಾಗಿ ಶೆಟ್ಟರ್‌ ಅವರು ಪರಿಷತ್‌ ಸಭಾಪತಿ ಹೊರಟ್ಟಿ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದ್ದಾರೆ. ಇ-ಮೇಲ್‌ ಮೂಲಕ ಬೇಡ, ನೇರವಾಗಿ ಬಂದು ರಾಜೀನಾಮೆ ನೀಡುವಂತೆ ಹೊರಟ್ಟಿ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

Share Post