DistrictsPolitics

ಹನುಮ ಧ್ವಜ ತೆರವು ಪ್ರಕರಣ; ಕೆರಗೋಡಿನಿಂದ ಮಂಡ್ಯಕ್ಕೆ ಮೆರವಣಿಗೆ

ಮಂಡ್ಯ;  ಕೆರಗೋಡಿನಲ್ಲಿ ಹನುಮ ಧ್ವಜ ತೆರವುಗಳಿಸಿದ ಪ್ರಕರಣದ ಹಿನ್ನೆಲೆಯಲ್ಲಿ ಹೋರಾಟ ಮತ್ತಷ್ಟು ತೀವ್ರ ಸ್ವರೂಪಕ್ಕೆ ತಿರುಗಿದೆ. ಇಂದು ಮಂಡ್ಯದಲ್ಲಿ ಹಿಂದೂಪರ ಸಂಘಟನೆಗಳು ಕೆರಗೋಡು ಗ್ರಾಮದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪಾದಯಾತ್ರೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.

ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ಹೋರಾಟಕ್ಕೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು, ಶಾಸಕರು, ಕಾರ್ಯಕರ್ತರು ಸಾಥ್ ನೀಡಿದ್ದಾರೆ.

ಮಾಜಿ ಸಚಿವ ಸಿ.ಟಿ ರವಿ, ಪ್ರೀತಂಗೌಡ, ಹೆಚ್‌ಡಿಕೆ, ಜನಾರ್ದನ ರೆಡ್ಡಿ ಸಹ ಹೋರಾಟಕ್ಕೆ ಸಾಥ್ ನೀಡಿದ್ದರು.

Share Post