ಗೋಡ್ಸೆ ವಂಶದವರು ಸಮಾಜದ ಶಾಂತಿ ಕದಡುತ್ತಿದ್ದಾರೆ; ಸಿಎಂ ಸಿದ್ದರಾಮಯ್ಯ
ಬೆಂಗಳೂರು; ಕೆರಗೋಡು ಧ್ವಜಸ್ತಂಭದ ವಿಚಾರವಾಗಿ ಸಮಾಜದ ಶಾಂತಿ ಕದಡಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಗೋಡ್ಸೆ ವಂಶದವರೆಲ್ಲಾ ಸೇರಿ ಸಮಾಜದ ಶಾಂತಿಯನ್ನು ಕದಡುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ಕೆಲವರು ನಾವು ಮಾತ್ರ ಹಿಂದೂಗಳು ಎಂದು ತಿಳಿದುಕೊಂಡಿದ್ದಾರೆ. ಅವರು ಸಮಾಜದಲ್ಲಿ ಶಾಂತಿ ಕದಡುತ್ತಿದ್ದಾರೆ. ಆ ಮೂಲಕ ರಾಜಕೀಯ ಲಾಭ ಮಾಡಿಕೊಳ್ಳಲು ಹೊರಟಿದ್ದಾರೆ. ಇದು ಸರಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು. ಇನ್ನು ಇದೇ ವೇಳೆ ಮಾತನಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಗೊಂದಲ ಸೃಷ್ಟಿಸಲು ಏನೇನೋ ಮಾಡುತ್ತಿದ್ದಾರೆ. ಹೇಳೇ ಮೈಸೂರು ಭಾಗದವರು ಅಣ್ಣ, ತಮ್ಮಂದಿರಂತೆ ಇದ್ದೆವು. ಇವರು ಅಶಾಂತಿ ಮೂಡಿಸುತ್ತಿದ್ದಾರೆ ಎಂದು ಬೇರ ವ್ಯಕ್ತಪಡಿಸಿದ್ದಾರೆ.