CrimeNational

ಶಿವಮೂರ್ತಿ ವಿರುದ್ಧ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಒಡನಾಡಿ ಸಂಸ್ಥೆ

ಮೈಸೂರು; ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ವಿರುದ್ಧ ಮೈಸೂರಿನ ಒಡನಾಡಿ ಸಂಸ್ಥೆ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಪೋಕ್ಸೋ ಪ್ರಕರಣದಲ್ಲಿ ಹೈಕೋರ್ಟ್‌ ಶಿವಮೂರ್ತಿಯವರಿಗೆ ಷರತ್ತುಬದ್ಧ ಜಾಮೀನು ನೀಡಿದೆ. ಇದನ್ನು ಪ್ರಶ್ನಿಸಿ ಒಡನಾಡಿ ಸಂಸ್ಥೆ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿದ್ದು, ವಿಚಾರಣೆಗೆ ಸುಪ್ರೀಂಕೋರ್ಟ್‌ ನ್ಯಾಯಪೀಠ ಅಂಗೀಕಾರ ಮಾಡಿದೆ.

ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್‌ ಕರ್ನಾಟಕ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದ್ದು, ನಾಲ್ಕು ವಾರಗಳಲ್ಲಿ ಸ್ಪಷ್ಟನೆ ನೀಡುವಂತೆ ಸೂಚನೆ ನೀಡಲಾಗಿದೆ. ಒಡನಾಡಿ ಸಂಸ್ಥೆ  ಪರವಾಗಿ ಸುಪ್ರೀಂಕೋರ್ಟ್‌ನಲ್ಲಿ ವಕೀಲೆ ಅಪರ್ಣಾ ಭಟ್ ಅವರು ವಾದ ಮಂಡಿಸುತ್ತಿದ್ದಾರೆ.

ಮುರುಘಾ ಮಠದ ಶಾಲೆಯಲ್ಲಿ ಓದುತ್ತಿದ್ದ ಇಬ್ಬರು ಬಾಲಕಿಯರ ಮೇಲೆ ಶಿವಮೂರ್ತಿಯವರು ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪವಿದೆ. ಈ ಸಂಬಂಧ ಶಿವಮೂರ್ತಿಯವರು ಒಂದು ವರ್ಷಕ್ಕೂ ಹೆಚ್ಚು ಕಾಲ ಜೈಲಿನಲ್ಲಿದ್ದು, ವಿಚಾರಣೆ ಎದುರಿಸಿದ್ದರು. ಕಳೆದ ನವೆಂಬರ್‌ನಲ್ಲಿ ಅವರಿಗೆ ಜಾಮೀನು ಮಂಜೂರಾಗಿದ್ದರಿಂದ, ಜೈಲಿನಿಂದ ಹೊರಬಂದಿದ್ದಾರೆ.

 

Share Post