NationalPolitics

Modi Speech; ಹಿಮಾಲಯ ಹರಿಯೋ ನದಿಗಳೆಲ್ಲಾ ನನ್ನಿಂದಲೇ ಅನ್ನೋಕೆ ಆಗುತ್ತಾ..?; ರಾಜ್ಯ ಸರ್ಕಾರದ ಆರೋಪಕ್ಕೆ ಮೋದಿ ಚಾಟಿ

ನವದೆಹಲಿ; ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ರಾಜ್ಯ ಸರ್ಕಾರದ ಆರೋಪಕ್ಕೆ ಚಾಟಿ ಬೀಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕದಂತಹ ರಾಜ್ಯಗಳಿಂದ ಸಂಗ್ರಹವಾಗುತ್ತಿರುವ ತೆರಿಗೆಯಿಂದಲೇ ಕೇಂದ್ರ ಸರ್ಕಾರ ನಡೆಯುತ್ತಿದೆ ಎಂದು ಹೇಳಿದ್ದರು. ಇದಕ್ಕೆ ಮಾರ್ಮಿಕವಾಗಿ ಪ್ರತುತ್ತರ ಕೊಟ್ಟಿರುವ ನರೇಂದ್ರ ಮೋದಿ, ಹರಿನದಿಗಳೆಲ್ಲಾ ನನ್ನಿಂದಲೇ ಹರಿಯುತ್ತಿರೋದು ಅಂತ ಹಿಮಾಲಯ ಅಂದುಕೊಂಡಂತೆ ಹೇಗಾಗುತ್ತದೆ ಎಂದು ಪ್ರಶ್ನೆ ಮಾಡಿದ್ದಾರೆ.

ಮುಂದುವರೆದ ಮಾತನಾಡಿದ ಮೋದಿಯವರು, ಕರೋನಾ ಸಮಯದಲ್ಲಿ ಕೇಂದ್ರ ಸರ್ಕಾರದಿಂದ ಆಕ್ಸಿಜನ್‌ ಸಿಲಿಂಡರ್‌ಗಳನ್ನು ರಾಜ್ಯಗಳಿಗೆ ಪೂರೈಕೆ ಮಾಡದೇ ಹೋಗಿದ್ದರೆ ಪರಿಸ್ಥಿತಿ ಹೇಗಿರುತ್ತಿತ್ತು ಎಂದು ಅರ್ಥ ಮಾಡಿಕೊಳ್ಳಬೇಕು. ನೇರವಾಗಿ ಕರ್ನಾಟಕ ಸರ್ಕಾರವನ್ನು ಪ್ರಸ್ತಾಪ ಮಾಡದೇ ಮಾತನಾಡಿದ ಪ್ರಧಾನಿ ಮೋದಿ, ಸಿದ್ದರಾಮಯ್ಯ ಅವರಿಗೆ ಟಾಂಗ್‌ ಕೊಟ್ಟಿದ್ದಾರೆ. ದೆಹಲಿಯಲ್ಲಿ ಇಂದು ನಡೆದ ಕಾಂಗ್ರೆಸ್‌ ಪ್ರತಿಭಟನೆಗೆ ರಾಜ್ಯಸಭೆಯಲ್ಲಿ ತಕ್ಕ ಉತ್ತರ ಕೊಟ್ಟಿದ್ದಾರೆ.

ಬಿಜೆಪಿಯ 400ಕ್ಕೂ ಅಧಿಕ ಲೋಕಸಭಾ ಸ್ಥಾನಗಳಲ್ಲಿ ಗೆಲ್ಲುತ್ತೆ ಅಂತ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಮಗೆ ಆಶೀರ್ವದಿಸಿದ್ದಾರೆ. ಹಾಗಿದ್ಮೇಲೆ ಕಾಂಗ್ರೆಸ್ ಪಕ್ಷ​ ಈ ಬಾರಿ 40 ಸ್ಥಾನಗಳನ್ನಾದರೂ ಗೆಲ್ಲಲಿ ಎಂಬುದು ನಮ್ಮ ಪ್ರಾರ್ಥನೆ ಎಂದು ಪ್ರಧಾನಿ ನರೇಂದ್ರ ಮೋದಿ(Modi) ಹೇಳಿದ್ದಾರೆ. ಕಾಂಗ್ರೆಸ್ 40 ಸ್ಥಾನಗಳನ್ನು ದಾಟುವುದಿಲ್ಲ. ನೀವು ನನ್ನನ್ನು ಹತ್ತಿಕ್ಕೋದಕ್ಕೆ ಸಾಧ್ಯವೇ ಇಲ್ಲ. ಆ ಪ್ರಯತ್ನ ಮಾಡೋದು ವ್ಯರ್ಥ ಎಂದೂ ಪ್ರಧಾನಿ ಮೋದಿ ಅಬ್ಬರಿಸಿದ್ದಾರೆ.

‘ಐಸಾ ಮೌಕಾ ಫಿರ್ ಕಹಾ ಮಿಲೇಗಾ’ ಹಾಡನ್ನು ಖರ್ಗೆಯವರು ಕೇಳಿರಬೇಕು ಅಂತ ನಾನು ಭಾವಿಸುತ್ತೇನೆ. ಸ್ವಾತಂತ್ರ್ಯ ಬಂದಾಗಿನಿಂದಲೂ ಕಾಂಗ್ರೆಸ್ ಅಧಿಕಾರದಲ್ಲಿತ್ತು. ಆಗಿನಿಂದಲೂ ಕಾಂಗ್ರೆಸ್‌ ಗೊಂದಲದಲ್ಲಿಯೇ ಇತ್ತು. ದೇಶದಲ್ಲಿ ಕಾಂಗ್ರೆಸ್‌ ಪಕ್ಷವೇ ಪ್ರಝಾಪ್ರಭುತ್ವದ ಕತ್ತು ಹಿಸುಕಿದೆ ಎಂದೂ ಮೋದಿ ಹೇಳಿದ್ದಾರೆ.

Share Post