Politics

Vibhakar shastri; ಕಾಂಗ್ರೆಸ್‌ಗೆ ಮತ್ತೊಂದು ಹೊಡೆತ; ಬಿಜೆಪಿ ಸೇರಿದ ಶಾಸ್ತ್ರಿ ಮೊಮ್ಮಗ!

ನವದೆಹಲಿ; ನಿನ್ನೆಯಷ್ಟೇ ಮಹಾರಾಷ್ಟ್ರದ ಮಾಜಿ ಸಿಎಂ ಅಶೋಕ್‌ ಚವಾಣ್‌ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದರು.. ಇದೀಗ ಕಾಂಗ್ರೆಸ್‌ಗೆ ಮತ್ತೊಂದು ಹೊಡೆತ ಬಿದ್ದಿದೆ… ದೇಶದ ಮಾಜಿ ಪ್ರಧಾನಿ ಲಾಲ್‌ ಬಹದ್ದೂರ್‌ ಶಾಸ್ತ್ರಿ ಮೊಮ್ಮಗ ವಿಭಾಕರ್‌ ಶಾಸ್ತ್ರಿ ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ… ಲೋಕಸಭಾ ಚುನಾವಣೆಗೂ ಮುನ್ನವೇ ಕಾಂಗ್ರೆಸ್‌ಗೆ ಸಂಕಷ್ಟದ ಸಂಕಷ್ಟ ಎದುರಾಗುತ್ತಿದೆ. ಇಂದು ಬೆಳಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ರಾಜೀನಾಮೆ ಸಲ್ಲಿಸಿದ್ದ ವಿಭಾಕರ್‌ ಶಾಸ್ತ್ರಿ, ಕೂಡಲೇ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ವಿಭಾಕರ್‌ ಶಾಸ್ತ್ರಿ;

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ ಪರಿಸ್ಥಿತಿ ಹೀನಾಯವಾಗಿದೆ. ಅಲ್ಲಿ ಅವರಿಗೆ ಅಭ್ಯರ್ಥಿಗಳೇ ಸಿಗುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ವಿಭಾಕರ್‌ ಶಾಸ್ತ್ರಿ ಕೂಡಾ ಪಕ್ಷ ತೊರೆದಿರುವುದು ಕಾಂಗ್ರೆಸ್‌ ನಾಯಕರಿಗೆ ಇರಿಸುಮುರಿಸು ತರಿಸಿದೆ. ಮಲ್ಲಿಕಾರ್ಜುನ ಖರ್ಗೆ ಅವರನ್ನು ಟ್ಯಾಗ್​​ ಮಾಡಿ ಟ್ವೀಟ್​​ ಮಾಡಿರುವ ವಿಭಾಕರ್‌ ಶಾಸ್ತ್ರಿ, ನಾನು ಈ ಮೂಲಕ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ;Valentines Day; ಪ್ರೇಮಿಗಳ ದಿನದ ಹಿಂದೆ ಇಷ್ಟೊಂದು ಕತೆ ಇದೆಯಾ?

ಬ್ರಜೇಶ್‌ ಪಾಠಕ್‌ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ;

ಲಾಲ್‌ ಬಹದ್ದೂರ್‌ ಶಾಸ್ತ್ರಿ ಜೈ ಜವಾನ್‌ ಜೈ ಕಿಸಾನ್‌ ಘೋಷಣೆ ಕೂಗಿದ್ದರು… ಮೋದಿಯವರ ನಾಯಕತ್ವದಲ್ಲಿ ಜೈ ಜವಾನ್‌ ಜೈ ಕಿಸಾವ್‌ ದೃಷ್ಟಿಕೋನ ಇಟ್ಟುಕೊಳ್ಳಲಾಗಿದೆ. ಹೀಗಾಗಿ ಅವರ ಕೈಬಲಪಡಿಸಬೇಕೆಂಬ ನಿಟ್ಟಿನಲ್ಲಿ ನಾನು ಬಿಜೆಪಿ ಸೇರಿದ್ದೇನೆ ಎಂದು ವಿಭಾಕರ್‌ ಶಾಸ್ತ್ರಿ ಹೇಳಿಕೊಂಡಿದ್ದಾರೆ. ಇಂದು ಅವರು ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರಿದ್ದಾರೆ.

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ನಿನ್ನೆಯಷ್ಟೇ ಬಿಜೆಪಿ ಸೇರಿದ್ದರು.. ಕೆಲ ದಿನಗಳ ಹಿಂದೆ ಬಾಬಾ ಸಿದ್ದಿಕ್ ಅವರು ಕೂಡಾ ಕಾಂಗ್ರೆಸ್​​​ಗೆ ಗುಡ್‌ಬೈ ಹೇಳಿದ್ದರು. ಇದೀಗ ಲಾಲ್‌ ಬಹದ್ದೂರ್‌ ಶಾಸ್ತ್ರಿ ಮೊಮ್ಮಗ ವಿಭಾಕರ್‌ ಶಾಸ್ತ್ರಿ ಕೂಡಾ ಕಾಂಗ್ರೆಸ್‌ ತೊರೆದಿದ್ದಾರೆ. ಚುನಾವಣೆ ವೇಳೆಗೆ ಇನ್ನೂ ಒಂದಷ್ಟು ನಾಯಕರು ಕಾಂಗ್ರೆಸ್‌ ತೊರೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ; Valentine’s Day Special; ಯಾವ ಸಿನಿಮಾಗೂ ಕಡಿಮೆ ಇಲ್ಲದ ಮುಖೇಶ್-ನೀತಾ ಅಂಬಾನಿ ಲವ್‌ ಸ್ಟೋರಿ!

ಇಂಡಿಯಾ ಒಕ್ಕೂಟಕ್ಕೂ ತೊಂದರೆ;

ಬಿಜೆಪಿಗೆ ಠಕ್ಕರ್‌ ಕೊಡಲು ಕಾಂಗ್ರೆಸ್‌ ನೇತೃತ್ವದಲ್ಲಿ ಇಂಡಿಯಾ ಒಕ್ಕೂಟ ರಚನೆ ಮಾಡಲಾಗಿತ್ತು. ಆದ್ರೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಇಂಡಿಯಾ ಒಕ್ಕೂಟದಿಂದ ಪಕ್ಷಗಳು ಹೊರಹೋಗುತ್ತಿವೆ. ಇಂಡಿಯಾ ಒಕ್ಕೂಟ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಜೆಡಿಯುನ ನಿತೀಶ್‌ ಕುಮಾರ್‌, ನೇರವಾಗಿ ಬಿಜೆಪಿ ಜೊತೆಗೇ ಸೇರಿ ಸರ್ಕಾರ ರಚನೆ ಮಾಡಿದ್ದಾರೆ. ಇತ್ತ ಎಎಪಿ ನಾಯಕ ಅರವಿಂದ್‌ ಕೇಜ್ರಿವಾಲ್‌, ಸ್ವತಂತ್ರವಾಗಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಹೇಳಿಕೊಂಡಿದ್ದಾರೆ. ಮಮತಾ ಬ್ಯಾನರ್ಜಿ ಕೂಡಾ ನಾವು ಸ್ವತಂತ್ರವಾಗಿ ಸ್ಪರ್ಧಿಸುತ್ತೇವೆ ಎಂದು ಹೇಳಿಬಿಟ್ಟಿದ್ದಾರೆ.  ಆರ್‌ಎಲ್‌ಡಿ ಪಕ್ಷ ಕೂಡಾ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದು ಖಚಿತವಾಗಿದೆ.

ಇದನ್ನೂ ಓದಿ; Wife Murder Case; ಪತ್ನಿ ಕೊಲೆ ಪ್ರಕರಣ; 31 ವರ್ಷದ ನಂತರ ಸಿಕ್ಕಿಬಿದ್ದ ಆರೋಪಿ!

 

Share Post