Health

Devegowda; ದೇವೇಗೌಡರ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಬೆಂಗಳೂರು; ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಡುವಿಲ್ಲದೆ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದ ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯದಲ್ಲಿ ಏರುಪೇರಾಗಿದೆ. ಇಂದು ಬೆಳಗ್ಗೆ ಅವರಿಗೆ ಉಸಿರಾಟದ ಸಮಸ್ಯೆ ಉಂಟಾಗಿದ್ದು, ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಬೆಳಗ್ಗೆಯೇ ದೇವೇಗೌಡರಿಗೆ ಉಸಿರಾಟದ ಸಮಸ್ಯೆ ಉಂಟಾಗಿದೆ. ಹೀಗಾಗಿ ಕೂಡಲೇ ಅವರನ್ನು ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಶ್ವಾಸಕೋಶ ತಜ್ಞ ಡಾ.ಸತ್ಯನಾರಾಯಣ ಅವರ ನೇತೃತ್ವದ ತಂಡ ದೇವೇಗೌಡರ ತಪಾಸಣೆ ನಡೆಸುತ್ತಿದೆ. ಸದ್ಯದ ಮಾಹಿತಿ ಪ್ರಕಾರ, ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

ಮಾಜಿ ಪ್ರಧಾನಿ ದೇವೇಗೌಡರಿಗೆ 90 ವರ್ಷ ವಯಸ್ಸಾಗಿದೆ.. ಇಳಿ ವಯಸ್ಸಿನಲ್ಲೂ ಅವರು ರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಲೋಕಸಭಾ ಚುನಾವನೆಗೆ ಅವರು ಸ್ಪರ್ಧೆ ಮಾಡೋದಿಲ್ಲ ಎಂದು ಹೇಳಿದ್ದಾರಾದರೂ, ಅಭ್ಯರ್ಥಿಗಳ ಆಯ್ಕೆ, ಪಕ್ಷ ಸಂಘಟನೆಯಲ್ಲಿ ಅವರು ಸಕ್ರಿಯಾಗಿದ್ದಾರೆ… ಕೆಲ ದಿನಗಳಿಂದ ಅವರು ಹಾಸನ ಸೇರಿ ಹಲವೆಡೆ ಸುತ್ತಾಟ ನಡೆಸಿದ್ದರು.

ಇನ್ನೊಂದೆಡೆ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಫೈನಲ್‌ ಮಾಡುವ ಸಂಬಂಧ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮೂರು ದಿನಗಳ ಹಿಂದೆ ಸಬೆ ನಡೆಸಿದ್ದರು. ಮಂಡ್ಯ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮುಖಂಡರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ಸ್ಥಳೀಯ ನಾಯಕರ ಅಭಿಪ್ರಾಯ ಪಡೆದು ಅಭ್ಯರ್ಥಿಯನ್ನು ಅಂತಿಮಗೊಳಿಸಿದ್ದರು.

ಇನ್ನು ಸಂಸತ್ತಿನಲ್ಲಿ ಬಜೆಟ್‌ ಅಧಿವೇಶನ ನಡೆಯುತ್ತಿದೆ. ಈ ಅಧಿವೇಶನದಲ್ಲೂ ರಾಜ್ಯಸಭಾ ಸದಸ್ಯರಾಗಿ ದೇವೇಗೌಡರು ಪಾಲ್ಗೊಂಡಿದ್ದರು. ಎರಡು ದಿನದಲ್ಲಿ ರಾಜ್ಯದಲ್ಲಿ ಮಾತನಾಡಿದ್ದರು ಕೂಡಾ. ಇದರ ಜೊತೆಗೆ ಜನವರಿ 22ರಂದು ನಡೆದ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೂ ದೇವೇಗೌಡರು ಹೋಗಿದ್ದರು..

ಹೀಗೆ ಬಿಡುವಿಲ್ಲದೆ ಸುತ್ತಾಟ ನಡೆಸಿದ್ದರಿಂದ ಅವರ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದೆ. ಉಸಿರಾಟದ ತೊಂದರೆ ಉಂಟಾಗಿದೆ. ಹೀಗಾಗಿ, ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಚೇತರಿಕೆ ನಂತರ ಮತ್ತೆ ಅವರು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವ ಸಾಧ್ಯತೆ ಇದೆ.

Share Post