BengaluruUncategorized

ಕೋರೊನಾ ಬಗ್ಗೆ ತಜ್ಞರಿಂದ ಮಾಹಿತಿ; ನಾಳೆ ಸಂಪುಟ ಸಭೆಯಲ್ಲಿ ತೀರ್ಮಾನ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡಿದ್ದೇನೆ. ಅಲ್ಲದೆ ದೇಶ ವಿದೇಶಗಳಲ್ಲಿ ಒಮಿಕ್ರಾನ್‌ ಹರಡುತ್ತಿರುವುದರ ಬಗ್ಗೆಯೂ ಮಾಹಿತಿ ಪಡೆದಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.


ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಕೊವಿಡ್‌ ಪರಿಸ್ಥಿತಿ ಬಗ್ಗೆ ಮಾಹಿತಿ ಸಂಗ್ರಹಿಸಿದ್ದೇನೆ. ರಾಜ್ಯದಲ್ಲಿ ಇನ್ನೂ ಏನೆಲ್ಲಾ ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ಚರ್ಚೆ ನಡೆದಿದೆ. ನಾಳೆ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಅನಂತರ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. ಹೊಸ ವರ್ಷದ ಸಂಭ್ರಮಾಚರಣೆಗೆ ಬ್ರೇಕ್‌ ಹಾಕುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Share Post