National

ಸೇನಾ ಮುಖ್ಯಸ್ಥ ಬಿಪಿನ್‌ ರಾವತ್‌ ಇದ್ದ ಸೇನಾ ಹೆಲಿಕಾಪ್ಟರ್‌ ಪತನ..!

ಊಟಿ: ಸೇನಾಪಡೆಗಳ ಮುಖ್ಯಸ್ಥ ಬಿಪಿನ್‌ ರಾವತ್‌ ಹಾಗೂ ಅವರ ಪತ್ನಿ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್‌ ತಮಿಳುನಾಡಿನ ಊಟಿಯ ಬಳಿಯ ಕುನ್ನೂರಿನಲ್ಲಿ ಪತನವಾಗಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಘಟನೆಯಲ್ಲಿ ಮೂವರನ್ನು ರಕ್ಷಣೆ ಮಾಡಲಾಗಿದ್ದು, ತೀವ್ರವಾಗಿ ಗಾಯಗೊಂಡಿರುವ ಇಬ್ಬರನ್ನು ವೆಲ್ಲಿಂಗ್ಟನ್‌ ಆಸ್ಪತ್ರೆಗೆ ಸೇರಿಸಲಾಗಿದೆ.‌

ಕುನ್ನೂರಿನಲ್ಲಿ ಅಪಘಾತಕ್ಕೀಡಾದ ಹೆಲಿಕಾಪ್ಟರ್ ಅಪಘಾತದಲ್ಲಿ ಸಿಲುಕಿದ ನಂತರ ಬಿಪಿನ್ ರಾವತ್ ಅವರ ಸ್ಥಿತಿ ತಿಳಿದಿಲ್ಲ. ಕೊಯಮತ್ತೂರಿನ ಸುಲೂರು ವಾಯುಪಡೆ ನೆಲೆಯಿಂದ ವೆಲ್ಲಿಂಗ್ಟನ್ ಸೇನಾ ಕೇಂದ್ರಕ್ಕೆ ಪ್ರಯಾಣಿಸುತ್ತಿದ್ದಾಗ ಹೆಲಿಕಾಪ್ಟರ್ ಅಪಘಾತಕ್ಕೆ ಒಳಗಾಗಿತ್ತು.

ಹೆಲಿಕಾಪ್ಟರ್‌ ಪತನಕ್ಕೆ ಕಾರಣ ಏನು ಎಂದು ಗೊತ್ತಾಗಲಿಲ್ಲ. ಹಲಿಕಾಪ್ಟರ್‌ ಪತನವಾಗುತ್ತಿದ್ದಂತೆ ಬೆಂಕಿಯಿಂದ ಹೊತ್ತಿ ಉರಿದಿದೆ.  ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ರಕ್ಷಣಾ ಸಿಬ್ಬಂದಿ ಆಗಮಿಸಿದ್ದಾರೆ. ಹೆಲಿಕಾಪ್ಟರ್‌ನಲ್ಲಿ ಸೇನಾ ಸಿಬ್ಬಂದಿ ಸೇರಿ 9 ಮಂದಿ ಪ್ರಯಾಣಿಸುತ್ತಿದ್ದರೆಂದು ಗೊತ್ತಾಗಿದೆ. ದುರಂತದ ಬಗ್ಗೆ ರಕ್ಷಣಾ ಇಲಾಖೆ ತನಿಖೆ ಆದೇಶ ಮಾಡಿದೆ.

 

 

Share Post