Lokayukta; ಸಿದ್ದರಾಮಯ್ಯ ವಿರುದ್ಧದ ಲಂಚ ಪ್ರಕರಣ; ಸಿಎಂಗೆ ʻಲೋಕಾʼ ಸಂಕಷ್ಟ!
ಬೆಂಗಳೂರು; ಲೋಕಸಭಾ ಚುನಾವಣೆ ಸನಿಹದಲ್ಲೇ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ಎದುರಾಗಿದೆ. ಹುದ್ದೆಯೊಂದಕ್ಕೆ ಸಿಎಂ ಸಿದ್ದರಾಮಯ್ಯ ಅವರು ಲಂಚ ಪಡೆದಿದ್ದಾರೆ ಎಂಬ ಆರೋಪದ ಕೇಸ್ ಮೇಲೆ ಹಾಕಿದ್ದ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ಕೋರ್ಟ್ ತಿರಸ್ಕಾರ ಮಾಡಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರಿಗೆ ಪ್ರಕರಣದ ವಿಚಾರಣೆ ಎದುರಿಸುವ ಸಂಕಷ್ಟ ಶುರುವಾಗಿದೆ.
ಇದನ್ನೂ ಓದಿ; Siddu Vs Modi; ಮೋದಿ ಅವರು ಒಕ್ಕೂಟ ವ್ಯವಸ್ಥೆಗೆ ಅಪಾಯ; ಸಿದ್ದರಾಮಯ್ಯ
ಎನ್.ಆರ್.ರಮೇಶ್ ಸಲ್ಲಿಸಿದ್ದ ಲೋಕಾಯುಕ್ತ ದೂರು;
ಎನ್.ಆರ್.ರಮೇಶ್ ಸಲ್ಲಿಸಿದ್ದ ಲೋಕಾಯುಕ್ತ ದೂರು; ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ವ್ಯಕ್ತಿಯೊಬ್ಬರಿಗೆ ಹುದ್ದೆ ನೀಡುವುದಕ್ಕಾಗಿ ಕೋಟ್ಯಂತರ ರೂಪಾಯಿ ಲಂಚ ಪಡೆದಿದ್ದಾರೆ ಎಂದು ದೂರಿನಲ್ಲಿ ಆರೋಪ ಮಾಡಲಾಗಿತ್ತು. ವಿಚಾರಣೆ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು, ಸಿಎಂ ಸಿದ್ದರಾಮಯ್ಯ ವಿರುದ್ಧದ ಆರೋಪಕ್ಕೆ ಸೂಕ್ತ ದಾಖಲೆಗಳಿಲ್ಲ. ಜೊತೆಗೆ ತನಿಖೆಯಲ್ಲಿ ಆರೋಪ ಸಾಬೀತಾಗಿಲ್ಲ ಎಂದು ಬಿ ರಿಪೋರ್ಟ್ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ಕೋರ್ಟ್, ಇದನ್ನು ತಿರಸ್ಕರಿಸಿದೆ. ಪ್ರಕರಣದ ಮರು ತನಿಖೆ ಮಾಡಿ ಆರು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಸೂಚನೆ ಕೊಟ್ಟಿದೆ.
ಇದನ್ನೂ ಓದಿ; Loksabha; ಡಾ.ಸಿ.ಎನ್.ಮಂಜುನಾಥ್ ಸ್ಪರ್ಧೆ ಬಹುತೇಕ ಪಕ್ಕಾ; ಮಂಡ್ಯನಾ, ಗ್ರಾಮಾಂತರನಾ..?
ಏನಿದು ಸಿದ್ದರಾಮಯ್ಯ ವಿರುದ್ಧದ ಆರೋಪ..?;
ಏನಿದು ಸಿದ್ದರಾಮಯ್ಯ ವಿರುದ್ಧದ ಆರೋಪ..?; ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದಾಗ, ಅಂದರೆ 2013-18ರ ಅವಧಿಯಲ್ಲಿ ನಡೆದ ಪ್ರಕರಣ ಇದಾಗಿದೆ. ಕಿಂಗ್ಸ್ ಕೋರ್ಟ್‌ನ ಎಲ್.ವಿವೇಕಾನಂದ ಎಂಬುವವರನ್ನು ಟರ್ಪ್ ಕ್ಲಿಬ್ ಸ್ಟೀವರ್ಡ್ ಹುದ್ದೆಗೆ ನೇಮಕ ಮಾಡಲಾಗಿತ್ತು. 2014ರಲ್ಲಿ ವಿವೇಕಾನಂದ ಅವರನ್ನು 3 ವರ್ಷದ ಅವಧಿಗೆ ನೇಮಕ ಮಾಡಿ ಆದೇಶ ಹೊರಡಿಸಲಾಗಿತ್ತು. ವಿವೇಕಾನಂದ ಅವರ ಬಳಿಯಿಂದ ಹಣ ಪಡೆದು ಈ ಹುದ್ದೆ ನೀಡಲಾಗಿತ್ತು ಅನ್ನೋದು ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಆರೋಪ. ಈ ಸಂಬಂದ ಅವರು ಲೋಕಾಯುಕ್ತಕ್ಕೆ ದೂರು ಕೊಟ್ಟಿದ್ದರು. ವಿವೇಕಾನಂದ ಅವರಿಂದ ಸಿಎಂ ಸಿದ್ದರಾಮಯ್ಯ ಅವರು 1.30ಕೋಟಿ ರೂಪಾಯಿ ಹಣ ಪಡೆದು ಈ ಹುದ್ದೆ ನೀಡಿದ್ದಾರೆ ಎಂದು ಎನ್.ಆರ್.ರಮೇಶ್ ದೂರಿನಲ್ಲಿ ಆರೋಪ ಮಾಡಿದ್ದರು.
ಇದನ್ನೂ ಓದಿ; After Marriage; ದಂಪತಿಗಳು ಹೀಗೆ ಜೀವಿಸಿದರೆ ಮಾತ್ರ ಅನ್ಯೋನ್ಯತೆ ಬೆಳೆಯುತ್ತೆ!
ಬಿ ರಿಪೋರ್ಟ್ ಸಲ್ಲಿಕೆ ಮಾಡಿದ್ದ ಲೋಕಾಯುಕ್ತ;
ಬಿ ರಿಪೋರ್ಟ್ ಸಲ್ಲಿಕೆ ಮಾಡಿದ್ದ ಲೋಕಾಯುಕ್ತ; ಲೋಕಾಯುಕ್ತ ಪೊಲೀಸರು ಈ ಪ್ರಕರಣದ ತನಿಖೆ ಕೈಗೊಂಡಿದ್ದರು. ತನಿಖೆ ಮುಗಿದ ನಂತರ ಆರೋಪ ಸಾಬೀತಾಗಿಲ್ಲ. ಇದಕ್ಕೆ ಸೂಕ್ತ ದಾಖಲೆಗಳಿಲ್ಲ ಎಂಬ ನಿರ್ಧಾರಕ್ಕೆ ಬಂದಿದ್ದರು. ಈ ಸಂಬಂಧ ಅವರು ಕೋರ್ಟ್‌ಗೆ ಬಿ ರಿಪೋರ್ಟ್ ಸಲ್ಲಿಸಿದ್ದರು. ಇದನ್ನು ಮತ್ತೆ ಕೋರ್ಟ್‌ನಲ್ಲಿ ಪ್ರಶ್ನೆ ಮಾಡಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್, ಬಿ ರಿಪೋರ್ಟ್ ತಿರಸ್ಕಾರ ಮಾಡಿದೆ. ಮರು ತನಿಖೆ ನಡೆಸುವಂತೆ ಆದೇಶ ನೀಡಿದೆ.
ಇದನ್ನೂ ಓದಿ; ಬೆಂಗಳೂರಿನಲ್ಲಿ ಫೆ.26-27 ರಂದು ಉದ್ಯೋಗ ಮೇಳ; ಡಾ. ಶರಣಪ್ರಕಾಶ ಪಾಟೀಲ್
ಚುನಾವಣೆ ಸಮಯದಲ್ಲೇ ಬಿಜೆಪಿಗೆ ಸಂಕಷ್ಟ;
ಚುನಾವಣೆ ಸಮಯದಲ್ಲೇ ಬಿಜೆಪಿಗೆ ಸಂಕಷ್ಟ; ಕಳೆದ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ನಾಯಕರು ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮೀಷನ್ ಆರೋಪ ಮಾಡಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ವಿರುದ್ಧವೇ ತನಿಖೆ ನಡೆಯುತ್ತಿದೆ. ಚುನಾವಣೆ ಸಮಯದಲ್ಲೇ ಸಿಎಂ ಸಿದ್ದರಾಮಯ್ಯ ಅವರಿಗೆ ಕಾನೂನು ಸಂಕಷ್ಟ ಎದುರಾಗಿದೆ. ಇನ್ನು ಬಜೆಟ್ ಅಧಿವೇಶನ ನಡೆಯುತ್ತಿರುವುದರಿಂದ ಬಿಜೆಪಿ ನಾಯಕರು ಇದೇ ವಿಚಾರವನ್ನಿಟ್ಟುಕೊಂಡು ಸದನದಲ್ಲಿ ಗದ್ದಲ ಎಬ್ಬಿಸುವ ಸಾಧ್ಯತೆ ಇದೆ.