BengaluruEconomy

BBMP; ಆಸ್ತಿ ತೆರಿಗೆ ಬಾಕಿ ವಿಚಾರ; ಒನ್ ಟೈಮ್ ಸೆಟ್ಲ್ ಮೆಂಟ್ ಸೌಲಭ್ಯ

ಬೆಂಗಳೂರು; ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ತಪ್ಪಾಗಿ ಘೋಷಿಸಿಕೊಂಡಿರುವ ಆಸ್ತಿ ಮಾಲೀಕರಿಗೆ ಸರ್ಕಾರದ ಆದೇಶದಂತೆ ‘ಒನ್ ಟೈಮ್ ಸೆಟ್ಲ್ ಮೆಂಟ್’(ಒಟಿಎಸ್) ಅನ್ನು ಆನ್‌ಲೈನ್ ಮೂಲಕ ಪಾವತಿಸಲು ಅವಕಾಶ ನೀಡಲಾಗಿದೆ.

ಆನ್‌ಲೈನ್‌ ಮೂಲಕ ಪಾವತಿ ವ್ಯವಸ್ಥೆ;

ಆನ್‌ಲೈನ್‌ ಮೂಲಕ ಪಾವತಿ ವ್ಯವಸ್ಥೆ; ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ತಪ್ಪಾಗಿ ಘೋಷಿಸಿಕೊಂಡಿರುವ ಮಾಲೀಕರಿಗಾಗಿ ‘ಒನ್ ಟೈಮ್ ಸೆಟ್ಲ್ ಮೆಂಟ್’(ಒಟಿಎಸ್) ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದ್ದು, ಒಟಿಎಸ್ ಸೌಲಭ್ಯವನ್ನು ಆನ್‌ಲೈನ್ ಮೂಲಕ ಪಡೆದು ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.

ಸರ್ಕಾರದಿಂದ ಹೊಸ ಅಧಿಸೂಚನೆ;

ಸರ್ಕಾರದಿಂದ ಹೊಸ ಅಧಿಸೂಚನೆ; ರಾಜ್ಯ ಸರ್ಕಾರವು ದಿನಾಂಕ: 22-02-2024ರಂದು(ಗುರುವಾರ) ‘ಒನ್ ಟೈಮ್ ಸೆಟ್ಲ್ ಮೆಂಟ್’(ಒಟಿಎಸ್) ಯೋಜನೆಯ ಕುರಿತು ಅಧಿಸೂಚನೆ ಹೊರಡಿಸಲಾಗಿದೆ. ಅದರಂತೆ ಪಾಲಿಕೆಯ ಆಸ್ತಿ ತೆರಿಗೆಯನ್ನು ಆನ್ ಲೈನ್ ಮೂಲಕ ಪಾವತಿಸುವ ಸಾಪ್ಟ್ ವೇರ್ ನಲ್ಲಿ ಒಟಿಎಸ್ ಅನ್ನು ಪಾವತಿಸಲು ಅವಕಾಶ ಕಲ್ಪಿಸಲಾಗಿದ್ದು, ಎಲ್ಲಾ ನಾಗರಿಕರು ಈಗ ಒಟಿಎಸ್ ನ ಸಂಪೂರ್ಣ ಪ್ರಯೋಜನವನ್ನು ಪಡೆದು ಆನ್‌ಲೈನ್‌ನಲ್ಲಿ ಪಾವತಿಸಬಹುದಾಗಿದೆ.

ಶೇ.50ರಷ್ಟು ದಂಡ ಕಡಿತ ವ್ಯವಸ್ಥೆ;

ಶೇ.50ರಷ್ಟು ದಂಡ ಕಡಿತ ವ್ಯವಸ್ಥೆ; ಬಿಬಿಎಂಪಿಯ ಆನ್‌ಲೈನ್ ಆಸ್ತಿ ತೆರಿಗೆ ಪಾವತಿ ವ್ಯವಸ್ಥೆಯಲ್ಲಿ OTS ಆದೇಶವನ್ನು ಜಾರಿಗೆ ತಂದಿದ್ದು, ನಾಗರೀಕರು ಸಂಪೂರ್ಣ ಬಡ್ಡಿ ಮನ್ನಾ, ವಂಚನೆ ಪ್ರಕರಣಗಳಲ್ಲಿ ಶೇ 50 ರಷ್ಟು ದಂಡ ಕಡಿತ ಹಾಗೂ ವಸತಿ ಮತ್ತು ಮಿಶ್ರ ಬಳಕೆಗೆ ಪ್ರಕರಣಗಳಲ್ಲಿ ಮಾತ್ರ ಗರಿಷ್ಟ 5-ವರ್ಷಗಳ ಮಿತಿ ಪ್ರಯೋಜನವನ್ನು ತಕ್ಷಣವೇ ಪಡೆಯಬಹುದಾಗಿದೆ.

ಪಾಲಿಕೆಯ ಅಧಿಕೃತ ವೆಬ್ ಸೈಟ್ https://bbmptax.karnataka.gov.inಗೆ ಭೇಟಿ ನೀಡಿ, ಒಟಿಎಸ್ ನ ಸಂಪೂರ್ಣ ಪ್ರಯೋಜನವನ್ನು ಆನ್‌ಲೈನ್‌ನಲ್ಲಿ ಪಡೆದು ಪಾವತಿಸಬಹುದಾಗಿದೆ.

Share Post