ಪರಿಷತ್ನಲ್ಲಿ ಪಾಕಿಸ್ತಾನ ಪರ ಘೋಷಣೆ ಫೈಟ್; ಕೈಕೈ ಮಿಲಾಯಿಸಲು ಹೋದ ನಾಯಕರು!
ಬೆಂಗಳೂರು; ರಾಜ್ಯಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಅವರ ವಿಜಯೋತ್ಸವದ ಸಂದರ್ಭದಲ್ಲಿ ವಿಧಾನಸೌಧದ ಆವರಣದಲ್ಲೇ ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿದ ಆರೋಪ ಕೇಳಿಬಂದಿತ್ತು. ಈ ವಿಷಯ ಇಂದು ವಿಧಾನ ಮಂಡಲದ ಉಭಯ ಸದನಗಳಲ್ಲಿ ಭಾರಿ ಕೋಲಾಹಲ ಸೃಷ್ಟಿಸಿತು. ವಿಧಾನಪರಿಷತ್ನಲ್ಲಿ ಕೈಕೈ ಮಿಲಾಯಿಸುವ ಹಂತ ತಲುಪಿತ್ತು.
ಆಡಳಿತ ನಡೆಸೋದಕ್ಕೆ ನಾಲಾಯಕ್ ಎಂದ ರವಿಕುಮಾರ್;
ಆಡಳಿತ ನಡೆಸೋದಕ್ಕೆ ನಾಲಾಯಕ್ ಎಂದ ರವಿಕುಮಾರ್; ವಿಧಾನಪರಿಷತ್ನಲ್ಲಿ ಬಿಜೆಪಿ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಈ ವಿಚಾರ ಪ್ರಸ್ತಾಪ ಮಾಡಿದರು. ಈ ವೇಳೆ ಕಾಂಗ್ರೆಸ್ ಸದಸ್ಯ ಸಲೀಂ ಅಹಮದ್, ಪಾಕಿಸ್ತಾನ್ ಜಿಂದಾಬಾದ್ ಎಂದು ಯಾರೂ ಕೂಗಿಯೇ ಇಲ್ಲ ಎಂದರು. ಇದಕ್ಕೆ ಬಿಜೆಪಿ ಸದಸ್ಯರು ಆಕ್ರೋಶಗೊಂಡರು. ಎದ್ದು ನಿಂತ ಬಿಜೆಪಿ ಸದಸ್ಯ ರವಿಕುಮಾರ್, ಈ ಸರ್ಕಾರ ರಾಜ್ಯದಲ್ಲಿ ಆಡಳಿತ ನಡೆಸೋದಕ್ಕೆ ನಾಲಾಯಕ್ ಎಂದರು. ಇದು ಅಯೋಗ್ಯ ಸರ್ಕಾರ ಎಂದು ಆಕ್ರೋಶ ಹೊರಹಾಕಿದರು.
ಅಬ್ದುಲ್ ಜಬ್ಬಾರ್ ಮಾತಿಗೆ ಸಿಡಿದೆದ್ದ ಬಿಜೆಪಿ ಸದಸ್ಯರು;
ಅಬ್ದುಲ್ ಜಬ್ಬಾರ್ ಮಾತಿಗೆ ಸಿಡಿದೆದ್ದ ಬಿಜೆಪಿ ಸದಸ್ಯರು; ರಾಜ್ಯ ಕಾಂಗ್ರೆಸ್ ಸರ್ಕಾರ ನಾಲಾಯಕ್ ಸರ್ಕಾರ. ಇದನ್ನು ವಜಾ ಮಾಡಬೇಕು ಎಂದು ಬಿಜೆಪಿ ಸದಸ್ಯ ರವಿಕುಮಾರ್ ಹೇಳಿದರು. ಇದಕ್ಕೆ ಬಿ.ಕೆ.ಹರಿಪ್ರಸಾದ್ ಆಕ್ಷೇಪ ವ್ಯಕ್ತಪಡಿಸಿದರು. ಕೇಂದ್ರದಲ್ಲಿ ನಿಮ್ಮದೇ ಸರ್ಕಾರ ಇದೆ. ತಾಕತ್ತಿದ್ದರೆ ರಾಜ್ಯ ಸರ್ಕಾರವನ್ನು ವಜಾಗೊಳಿಸಲಿ ಎಂದು ಸವಾಲು ಹಾಕಿದರು. ಇದೇ ವೇಳೆ ಕಾಂಗ್ರೆಸ್ ಸದಸ್ಯ ಅಬ್ದುಲ್ ಜಬ್ಬಾರ್, ಬಿಜೆಪಿ ಸದಸ್ಯ ರವಿಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು. ಈ ವೇಳೆ ಬಿಜೆಪಿ ಸದಸ್ಯರೆಲ್ಲಾ ಸದನ ಬಾವಿಗಿಳಿದು ಹೋರಾಟ ನಡೆಸಿದರು.
ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಹೋರಾಟ;
ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಹೋರಾಟ; ಇದೇ ವೇಳೆ ಏಕವಚನ ಪ್ರಯೋಗಗಳು ನಡೆದವು. ಇದಕ್ಕೆ ಬಿಜೆಪಿಯ ಸದಸ್ಯ ತುಳಸಿ ಮುನಿರಾಜು ಗೌಡ ಆಕ್ಷೇಪ ವ್ಯಕ್ತಪಡಿಸಿದರು. ಅನಂತರ ಕಾಂಗ್ರೆಸ್ ಸದಸ್ಯರು ಕೂಡಾ ವಾಗ್ದಾಳಿ ಆರಂಭಿಸಿದರು. ಇದರಿಂದಾಗಿ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿತು. ಇದರಿಂದಾಗಿ ಮಾರ್ಷಲ್ಗಳು ಸದಸ್ಯರನ್ನು ಸಮಾಧಾನಪಡಿಸಲು ಹರಸಾಹಸಪಡಬೇಕಾಯಿತು. ಕೊನೆಗೆ ಸಭಾಪತಿಯವರು ಕಲಾಪವನ್ನು ಕೆಲಕಾಲ ಮುಂದೂಡಬೇಕಾಯಿತು.