ಸೇನಾ ಹೆಲಿಕಾಪ್ಟರ್ ದುರಂತ; ಮೃತರ ಸಂಖ್ಯೆ 13ಕ್ಕೆ ಏರಿಕೆ
ವೆಲ್ಲಿಂಗ್ಟನ್: ತಮಿಳುನಾಡಿನ ಕೂನೂರು ಬಳಿ ನಡೆದ ಸೇನಾ ಹೆಲಿಕಾಪ್ಟರ್ ದುರಂತಕ್ಕೆ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ `1ಕ್ಕೆ ಏರಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೂವರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಹೆಲಿಕಾಪ್ಟರ್‌ನಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿ 14 ಮಂದಿ ಪ್ರಯಾಣಿಸುತ್ತಿದ್ದರು. ಇದರಲ್ಲಿ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಹೀಗಾಗಿ ಹೆಲಿಕಾಪ್ಟರ್‌ನಲ್ಲಿದ್ದ ಒಬ್ಬರು ಮಾತ್ರ ಬದುಕುಳಿದಿದ್ದು, ಅವರಿಗೆ ವೆಲ್ಲಿಂಗ್ಟನ್‌ನ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರಲ್ಲಿ ಬಹುತೇಕರ ಗುರುತು ಪತ್ತೆಯಾಗಿಲ್ಲ. ಡಿಎನ್‌ಎ ಪರೀಕ್ಷೆ ಮೂಲಕ ಮೃತರನ್ನು ಗುರುತಿಸಲು ತೀರ್ಮಾನಿಸಲಾಗಿದೆ.