LPG ಸಿಲಿಂಡರ್ 100 ರೂಪಾಯಿ ಕಡಿತ; ರಾಜ್ಯದಲ್ಲಿ 805 ರೂಪಾಯಿಗೆ ಸಿಗಲಿದೆ ಸಿಲಿಂಡರ್
ನವದೆಹಲಿ; ಮಹಿಳಾ ದಿನಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ಸ್ಪೆಷಲ್ ಗಿಫ್ಟ್ ನೀಡಿದ್ದಾರೆ. ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ 100 ರೂಪಾಯಿ ಕಡಿಮೆ ಮಾಡಿರುವುದಾಗಿ ನರೇಂದ್ರ ಮೋದಿಯವರು ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದು, ಮಹಿಳಾ ದಿನಾಚರಣೆಯ ಕೊಡುಗೆಯಾಗಿ ಅಡುಗೆ ಅನಿಲ ಸಿಲಿಂಡರ್ ಅನ್ನು 100 ರೂಪಾಯಿ ಕಡಿಮೆ ಮಾಡಿರುವುದಾಗಿ ಹೇಳಿಕೊಂಡಿದ್ದಾರೆ.
ಅಂತಾರಾಷ್ಟ್ರೀಯ ಮಹಿಳಾ ದಿನದ ಕೊಡುಗೆ;
ಅಂತಾರಾಷ್ಟ್ರೀಯ ಮಹಿಳಾ ದಿನದ ಕೊಡುಗೆ; ಇಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ವಿಶೇಷ ಕೊಡುಗೆ ನೀಡಿದ್ದಾರೆ. 14.5 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆ 100 ರೂಪಾಯಿ ಇಳಿಕೆ ಮಾಡಲಾಗಿದೆ. ಇದನ್ನು ಅವರೇ ಎಕ್ಸ್ ನಲ್ಲಿ ಹೇಳಿಕೊಂಡಿದ್ದಾರೆ. ದೇಶದ ಮಹಿಳೆಯರ ಸಬಲೀಕರಣದ ನಿಟ್ಟಿನಲ್ಲಿ ನಮ್ಮ ಬದ್ಧತೆಗೆ ಪೂರಕವಾಗಿ ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ನರೇಂದ್ರ ಮೋದಿಯವರು ಹೇಳಿಕೊಂಡಿದ್ದಾರೆ.
ಎಕ್ಸ್‌ನಲ್ಲಿ ಮೋದಿ ಹೇಳಿಕೊಂಡಿರುವುದೇನು..?
ಎಕ್ಸ್‌ನಲ್ಲಿ ಮೋದಿ ಹೇಳಿಕೊಂಡಿರುವುದೇನು..?
‘ಇಂದು ಅಂತಾರಾಷ್ಟ್ರೀಯ ಮಹಿಳಾ ದಿಚಾರಣೆ. ಹೀಗಾಗಿ ನಮ್ಮ ಸರ್ಕಾರ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 100 ರೂಪಾಯಿ ಕಡಿಮೆ ಮಾಡುತ್ತಿದೆ. ಇದು ದೇಶದಾದ್ಯಂತ ಲಕ್ಷಾಂತರ ಕುಟುಂಬಗಳ ಮೇಲಿನ ಆರ್ಥಿಕ ಹೊರೆ ಕಡಿಮೆ ಮಾಡಲಿದೆ. ಈ ವಿಶೇಷವಾಗಿ ನಮ್ಮ ನಾರಿ ಶಕ್ತಿಗೆ ಈ ನಿರ್ಧಾರದಿಂದ ಪ್ರಯೋಜನವಾಗಲಿದೆ. ಅಡುಗೆ ಅನಿಲವನ್ನು ಕೈಗೆಟುಕುವ ದರದಲ್ಲಿ ಸಿಗುವಂತೆ ಮಾಡುವುದು ನಮ್ಮ ಉದ್ದೇಶ. ಈ ಮೂಲಕ ನಾವು ಕುಟುಂಬಗಳ ಯೋಗಕ್ಷೇಮವನ್ನು ನೋಡಿಕೊಳ್ಳುತ್ತೇವೆ. ಜತೆಗೆ, ಆರೋಗ್ಯಕರ ವಾತಾವರಣವನ್ನು ನಿರ್ಮಿಸುವ ಗುರಿಯನ್ನು ನಾವು ಹೊಂದಿದ್ದೇವೆ. ಹೀಗಂತ ಮೋದಿ ಬರೆದುಕೊಂಡಿದ್ದಾರೆ.