ಮೊದಲ ಓಮಿಕ್ರಾನ್ ಸೋಂಕಿತ ಗುಣಮುಖ
ಮುಂಬೈ : ಮಹಾರಾಷ್ಟ್ರದಲ್ಲಿ ಪತ್ತೆಯಾಗಿದ್ದ ಓಮಿಕ್ರಾನ್ ಪ್ರಕರಣದ ಮೊದಲ ಸೋಂಕಿತನನ್ನು ಮತ್ತೊಮ್ಮೆ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈಗ ಅವರ ರಿಪೋರ್ಟ್ ನೆಗೆಟೀವ್ ಬಂದಿದೆ. ವ್ಯಕ್ತಿಯನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
33ವರ್ಷದ ಈ ವ್ಯಕ್ತಿ ಎಂಜನಿಯರಿಂಗ್ ವೃತ್ತಿಯವರು. ನವಂಬರ್ ಕೊನೆಯಲ್ಲಿ ದಕ್ಷಿಣ ಆಫ್ರಿಕಾದಿಂದ ದೆಹಲಿಗೆ ವಾಪಸ್ಸಾಗಿದ್ದರು. ಮುಂಬೈ ನಿವಾಸಿಯಾಗಿದ್ದ ಇವರನ್ನು ಪರೀಕ್ಷೆಗೆ ಒಳಪಡಿಸಿದಾಗ ಓಮಿಕ್ರಾನ್ ಇರುವುದು ದೃಢವಾಗಿತ್ತು.
ಸದ್ಯ ಓಮಿಕ್ರಾನ್‌ನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆದರೆ 1 ವಾರ ಮನೆಯಲ್ಲೇ ಕ್ವಾರಂಟೈನ್ ಆಗಿರಬೇಕು. ಕೋವಿಡ್ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ.