ಒಂದೂವರೆ ವರ್ಷದ ಬಳಿಕ ರೈತರ ಹೋರಾಟ ಅಂತ್ಯ; ಬೇಡಿಕೆಗಳಿಗೆ ಕೇಂದ್ರ ಅಸ್ತು
ನವದೆಹಲಿ: ಒಂದೂವರೆ ವರ್ಷದಿಂದ ನಡೆಯುತ್ತಿದ್ದ ರೈತರ ಹೋರಾಟ ಇಂದಿಗೆ ಅಂತ್ಯವಾಗಿದೆ. ಪ್ರತಿಭಟನೆಯನ್ನು ವಾಪಸ್ ಪಡೆಯುವುದಾಗಿ ರೈತರ ಸಂಘಟನೆಗಳು ಹೇಳಿವೆ
ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ರೈತರು ಕಳೆದ ಒಂದೂವರೆ ವರ್ಷದಿಂದ ದೆಹಲಿಯ ಹೊರವಲಯದಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ರೈತರ ಹೋರಾಟಕ್ಕೆ ಮಣಿದಿದ್ದ ಕೇಂದ್ರ ಸರ್ಕಾರ ಚಳಗಾಲದ ಅಧಿವೇಶನ ಮೊದಲ ದಿನ ಕೃಷಿ ತಿದ್ದುಪಡಿ ಮಸೂದೆಗಳನ್ನು ರದ್ದು ಮಾಡಿತ್ತು.
ಆದರೂ ರೈತರ ಹೋರಾಟ ನಿಲ್ಲಿಸಿರಲಿಲ್ಲ. ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡುವುದು, ರೈತರ ಮೇಲೆ ಹಾಕಿರುವ ಮೊಕದ್ದಮೆಗಳನ್ನು ವಾಪಸ್ ಪಡೆಯುವುದು, ಹುತಾತ್ಮ ರೈತರ ಕುಟುಂಬಗಳಿಗೆ ಪರಿಹಾರ ನೀಡುವುದು ಸೇರಿದಂತೆ ಪ್ರಮುಖ ಆರು ಬೇಡಿಕೆಗಳನ್ನು ಸರ್ಕಾರದ ಮುಂದಿತ್ತು. ಇದಕ್ಕೆ ಕೂಡಾ ಕೇಂದ್ರ ಸರ್ಕಾರ ಅಸ್ತು ಎಂದಿದೆ. ಎಲ್ಲಾ ಬೇಡಿಕೆ ಈಡೇರಿಸುವ ಭರವಸೆ ನೀಡಿದೆ.
ಈ ಹಿನ್ನೆಲೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ನೇತೃತ್ವದಲ್ಲಿ ನಡೆಯುತ್ತಿದ್ದ ರೈತರ ಪ್ರತಿಭಟನೆ ಕೊನೆಗೂ ಅಂತ್ಯವಾಗಿದೆ.