ಕಾಂತೇಶ್‌ಗೆ ಟಿಕೆಟ್ ಇಲ್ಲ, ಶೆಟ್ಟರ್‌ಗೆ ಟಿಕೆಟ್ ಕನ್ಫರ್ಮ್ ಇಲ್ಲ!
ಬೆಂಗಳೂರು; ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಲಾಗಿದೆ. ಇದರಲ್ಲಿ ಪ್ರತಾಪ ಸಿಂಹ, ಸದಾನಂದಗೌಡ, ನಳಿನ್ ಕುಮಾರ್ ಕಟೀಲ್ ಸೇರಿ ಹಲವು ಸಂಸದರಿಗೆ ಟಿಕೆಟ್ ನಿರಾಕರಿಸಲಾಗಿದೆ. ಮಂಡ್ಯದಿಂದ ಟಿಕೆಟ್ ಬಯಸಿದ್ದ ಸುಮಲತಾ ಅವರಿಗೂ ನಿರಾಸೆಯಾಗಿದೆ. ಯಾಕಂದ್ರೆ ಮಂಡ್ಯ, ಹಾಸನ ಹಾಗೂ ಕೋಲಾರ ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟುಕೊಡಲಾಗಿದೆ. ಉಳಿದಂತೆ ಮಾಜಿ ಸಿಎಂ ಜಗದೀಶ್ ಶೆಟ್ಟರ್‌ಗೆ ಟಿಕೆಟ್ ಕನ್ಫರ್ಮ್ ಆಗಿಲ್ಲ. ಈಶ್ವರಪ್ಪ ಪುತ್ರ ಕಾಂತೇಶ್‌ಗೆ ನಿರೀಕ್ಷೆಯಂತೆ ಟಿಕೆಟ್ ಮಿಸ್ ಆಗಿದೆ.
ಬಿಜೆಪಿ ನಾಯಕ ಈಶ್ವರಪ್ಪ ಅವರು ತಮ್ಮ ಪುತ್ರ ಕಾಂತೇಶ್‌ಗೆ ಹಾವೇರಿಯಿಂದ ಟಿಕೆಟ್ ಬಯಸಿದ್ದರು.. ಆದ್ರೆ ಹಾವೇರಿಯಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಟಿಕೆಟ್ ನೀಡಲಾಗಿದೆ. ಇತ್ತ ಬೆಳಗಾವಿಯಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್‌ಗೆ ಬಿಜೆಪಿ ಹೈಕಮಾಂಡ್ ಬಹುತೇಕ ಟಿಕೆಟ್ ಫೈನಲ್ ಮಾಡಿತ್ತು, ಆದ್ರೆ ಸ್ಥಳೀಯ ನಾಯಕರು ಗೋಬ್ಯಾಕ್ ಶೆಟ್ಟರ್ ಅಭಿಯಾನ ನಡೆಸಿದ್ದರು,. ಹೀಗಾಗಿ ಜಗದೀಶ್ ಶೆಟ್ಟರ್ ನನಗೆ ಬೆಳಗಾವಿ ಟಿಕೆಟ್ ಬೇಡ ಎಂಬಂತೆ ಹೇಳಿದ್ದರು. ಈ ಕಾರಣಕ್ಕೆ ಬೆಳಗಾವಿ ಟಿಕೆಟ್ ಅನ್ನು ತಡೆ ಹಿಡಿಯಲಾಗಿದೆ.
ಈಶ್ವರಪ್ಪ ಅವರು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್‌ಗೆ ಹೋಗಿ ವಾಪಸ್ ಬಂದರು. ಅವರಿಗೆ ಟಿಕೆಟ್ ನೀಡುತ್ತಿದ್ದೀರಿ, ನಾನು ಪಕ್ಷದ ಪರವಾಗಿ ಕೆಲಸ ಮಾಡಿದರೂ ನನ್ನ ಮಗನಿಗೆ ಟಿಕೆಟ್ ಕೊಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಹೀಗಿರುವಾಗಲೇ ಶೆಟ್ಟರ್ ಟಿಕೆಟ್ ಕನ್ಫರ್ಮ್ ಮಾಡಿಲ್ಲ. ಶೆಟ್ಟರ್ ಧಾರವಾಡ ಕೇಳಿದ್ದರಾದರೂ ಅಲ್ಲಿಗೆ ಪ್ರಹ್ಲಾದ್ ಜೋಶಿಯವರಿಗೇ ಟಿಕೆಟ್ ನೀಡಲಾಗಿದೆ.
ಇನ್ನು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಈ ಹಿಂದೆ ಬಿಜೆಪಿ ಟಿಕೆಟ್ ಕೇಳುವವರೇ ಇರಲಿಲ್ಲ.. ಆದ್ರೆ ಈ ಬಾರಿ ಫುಲ್ ಫೈಟ್ ನಡೆದಿದೆ. ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ.ಕೆ.ಸುಧಾಕರ್ ಹಾಗೂ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಪುತ್ರ ಅಲೋಕ್ ಟಿಕೆಟ್ ಬಯಸಿದ್ದಾರೆ.. ಇಬ್ಬರೂ ಪ್ರಬಲರಾಗಿದ್ದಾರೆ. ಹೀಗಾಗಿ ಹೈಕಮಾಂಡ್ ಯಾರಿಗೆ ಟಿಕೆಟ್ ನೀಡಬೇಕು ಎಂಬುದನ್ನು ನಿರ್ಧರಿಸಲಾಗದೆ ಈ ಕ್ಷೇತ್ರವನ್ನು ಪೆಂಡಿಂಗ್ ಇಡಲಾಗಿದೆ.
ಇನ್ನು ಚಿತ್ರದುರ್ಗದಲ್ಲಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಈ ಬಾರಿಯೂ ಟಿಕೆಟ್ ಆಕಾಂಕ್ಷಿಯಾಗಿದ್ದರು.. ಇದರ ಜೊತೆಗೆ ಮಾದಾರ ಚೆನ್ನಯ್ಯ ಸ್ವಾಮೀಜಿ ಟಿಕೆಟ್ ನೀಡುವ ಬಗ್ಗೆ ಚರ್ಚೆ ನಡೆಯುತ್ತಿತ್ತು. ಆದ್ರೆ ಆ ಕ್ಷೇತ್ರಕ್ಕೂ ಟಿಕೆಟ್ ಫೈನಲ್ ಆಗಿಲ್ಲ. ಉತ್ತರ ಕನ್ನಡದಲ್ಲಿ ಅನಂತ್ ಕುಮಾರ್ ಹೆಗಡೆ ಹಾಲಿ ಸಂಸದರು.. ಅವರು ಮೂರು ಬಾರಿ ಸಂಸದರಾಗಿದ್ದಾರೆ. ಈ ಬಾರಿ ಅವರು ರಾಜಕೀಯದಲ್ಲಿ ಸಕ್ರಿಯರಾಗಿರಲಿಲ್ಲ. ಹೀಗಾಗಿ ಈ ಬಾರಿ ಅವರಿಗೆ ಟಿಕೆಟ್ ನೀಡಬಾರದು ಎಂಬ ಕೂಗು ಎದ್ದಿದೆ. ಕಾಗೇರಿ, ಹರಿಪ್ರಕಾಶ್ ಕೋಣೆಮನೆ, ಚಕ್ರವರ್ತಿ ಸೂಲಿಬೆಲೆ ಈ ಮೂವರಲ್ಲಿ ಯಾರಿಗಾದರೂ ಟಿಕೆಟ್ ನೀಡಬಹುದು ಎಂದು ಹೇಳಲಾಗುತ್ತಿತ್ತು. ಆದ್ರೆ ಅಂತಿಮ ನಿರ್ಧಾರಕ್ಕೆ ಬರಲಾಗಿಲ್ಲ. ಇದರ ಜೊತೆಗೆ ರಾಯಚೂರು ಕ್ಷೇತ್ರಕ್ಕೂ ಇನ್ನೂ ಟಿಕೆಟ್ ಫೈನಲ್ ಆಗಿಲ್ಲ.