HealthPolitics

ಮಮತಾ ಬ್ಯಾನರ್ಜಿ ತಲೆಗೆ ತೀವ್ರ ಗಾಯ; ಆಸ್ಪತ್ರೆಗೆ ದಾಖಲು

ಕೋಲ್ಕತ್ತಾ; ಲೋಕಸಭಾ ಚುನಾವಣೆ ಹೊತ್ತಲ್ಲೇ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ತೀವ್ರವಾಗಿ ಗಾಯಗೊಂಡಿದ್ದಾರೆ. ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಟಿಎಂಸಿ ಪಕ್ಷ ಹೇಳಿಕೊಂಡಿದೆ.

  ಮಮತಾ ಬ್ಯಾನರ್ಜಿ ಹಣೆಗೆ ತೀವ್ರ ಪೆಟ್ಟಾಗಿದ್ದು, ರಕ್ತ ಸೋರುತ್ತಿರುವ ಫೋಟೋಗಳನ್ನು ಟಿಎಂಸಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಲಾಗಿದೆ. ಕೋಲ್ಕತ್ತಾದ ಎಸ್ ಎಂಕೆ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಚೇತರಿಕೆಗೆ ಪ್ರಾರ್ಥನೆ ಮಾಡಿ ಎಂದು ಟಿಎಂಸಿ ಪಕ್ಷ ಪಶ್ಚಿಮ ಬಂಗಾಳದ ಜನಕ್ಕೆ ಮನವಿ ಮಾಡಿದೆ.

ಮಮತಾ ಬ್ಯಾನರ್ಜಿಯವರು ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು. ಆದ್ರೆ ಅವರಿಗೆ ಯಾಕೆ ಗಾಯವಾಗಿದೆ ಎಂಬುದು ತಿಳಿದುಬಂದಿಲ್ಲ. ಆಸ್ಪತ್ರೆಯಲ್ಲಿ ಮಮತಾ ಬ್ಯಾನರ್ಜಿ ಮಲಗಿದ್ದು, ಮುಖದ ಮೇಲೆ ರಕ್ತ ಹರಿದಿದೆ. ಹಣೆಗೆ ಪಟ್ಟಾಗಿರುವುದು ಫೋಟೋದಲ್ಲಿ ಕಾಣಿಸುತ್ತಿದೆ.

ಕಳೆದ ವಿಧಾನಸಭಾ ಚುನಾವಣೆ ವೇಳೆಯೂ ಮಮತಾ ಬ್ಯಾನರ್ಜಿ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದರು. ವೀಲ್ ಚೇರ್ ನಲ್ಲೇ ಪ್ರಚಾರ ಮುಂದುವರೆಸಿದ್ದರು. ಇದೊಂದು ಗಿಮಿಕ್ ಎಂದು ಪ್ರತಿಪಕ್ಷಗಳು ಹೇಳಿದ್ದವು.

 

Share Post