ಲೈಂಗಿಕ ದೌರ್ಜನ್ಯ ಆರೋಪ; ಯಡಿಯೂರಪ್ಪ ಹೇಳೋದೇನು..?, ಗೃಹ ಮಂತ್ರಿ ಹೇಳಿದ್ದೇನು..?
ಬೆಂಗಳೂರು; ತನ್ನ 17 ವರ್ಷದ ಮಗಳ ಮೇಲೆ ಮಾಜಿ ಸಿಎಂ ಯಡಿಯೂರಪ್ಪ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ಮಾಜಿ ಸಿಎಂ ಯಡಿಯೂರಪ್ಪ ಸ್ಪಷ್ಟನೆ ಕೊಟ್ಟಿದ್ದಾರೆ.
ಕಷ್ಟ ಹೇಳಿಕೊಂಡು ಬಂದಿದ್ದ ತಾಯಿ-ಮಗಳು;
ತಾಯಿ-ಮಗಳು ಎರಡು ತಿಂಗಳ ಹಿಂದೆ ನನ್ನ ಮನೆ ಬಳಿ ಬರುತ್ತಿದ್ದರು. ನಮ್ಮ ಸೆಕ್ಯೂರಿಟಿ ಸಿಬ್ಬಂದಿ ಒಳಗೆ ಬಿಟ್ಟಿರಲಿಲ್ಲ. ಏನೋ ಕಷ್ಟ ಇದೆ ಎಂದು ಹೇಳಿಕೊಂಡು ಬಂದಿದ್ದರು. ಒಂದು ನಾನು ನೋಡಿ ಅವರನ್ನು ಮನೆಯೊಳಗೆ ಕರೆದು ಏನು ಸಮಸ್ಯೆ ಎಂದು ಕೇಳಿದ್ದೆ. ಆಗ ಅವರು ಏನೇನೋ ಸಮಸ್ಯೆಗಳನ್ನು ಹೇಳಿದ್ದರು. ನಾನು ಕೂಡಾ ಪೊಲೀಸ್ ಕಮೀಷನರ್ ದಯಾನಂದ್ ಅವರಿಗೆ ಕರೆ ಮಾಡಿ ಅವರ ಸಮಸ್ಯೆ ಪರಿಹರಿಸುವಂತೆ ಹೇಳಿದ್ದೆ. ಆದ್ರೆ ಈಗ ಅದೇ ಹೆಣ್ಣು ಮಕ್ಕಳು ನನ್ನ ವಿರುದ್ಧ ದೂರು ಕೊಟ್ಟಿದ್ದಾರೆ. ಆಗಲಿ ಅದನ್ನು ನಾನು ಎದುರಿಸುತ್ತೇನೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ನಾನು ಕಷ್ಟ ಎಂದು ಬಂದಿದ್ದಕ್ಕೆ ಆ ಹೆಣ್ಣು ಮಕ್ಕಳಿಗೆ ಸ್ವಲ್ಪ ಹಣವನ್ನೂ ಕೊಟ್ಟು ಕಳುಹಿಸಿದ್ದೆ. ಆದ್ರೆ ಈಗ ಅವರೇ ನನ್ನ ವಿರುದ್ಧ ದೂರು ಕೊಟ್ಟಿದ್ದಾರೆ.. ಕೇಸ್ ದಾಖಲಾಗಿದೆ.. ಇರಲಿ ನೋಡೋಣ, ನಾನು ಎಲ್ಲವನ್ನೂ ಎದುರಿಸುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಗೃಹ ಸಚಿವ ಪರಮೇಶ್ವರ್ ಹೇಳೋದೇನು..?;
ಯಡಿಯೂರಪ್ಪ ಅವರ ವಿರುದ್ಧ ಕಳೆದ ರಾತ್ರಿ ಮಹಿಳೆಯೊಬ್ಬರು ದೂರು ಕೊಟ್ಟಿದ್ದಾರೆ.. ಅದರ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.. ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶ ಇಲ್ಲ. ಯಡಿಯೂರಪ್ಪ ಅವರು ಹಿರಿಯ ರಾಜಕಾರಣಿಯಾಗಿದ್ದಾರೆ. ಹೀಗಾಗಿ ಇದು ಬಹಳ ಸೂಕ್ಷ್ಮ ಪ್ರಕರಣವಾಗಿದ್ದು, ಪೊಲೀಸರು ಕಾನೂನು ಪ್ರಕಾರ ತನಿಖೆ ನಡೆಸುತ್ತಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಅಗತ್ಯಬಿದ್ದರೆ ಮಹಿಳೆಗೆ ರಕ್ಷಣೆ ಕೊಡುತೇವೆ. ಯಡಿಯೂರಪ್ಪ ಅವರನ್ನು ವಶಕ್ಕೆ ಪಡೆಯುವ ಸಂಬಂಧ ತನಿಖೆ ನಂತರ ನಿರ್ಧಾರ ಮಾಡಲಾಗುತ್ತದೆ. ಈ ಬಗ್ಗೆ ಡಿ.ಕೆ.ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಜೊತೆ ಕೂಡಾ ಚರ್ಚೆ ಮಾಡಲಾಗಿದೆ ಎಂದೂ ಪರಮೇಶ್ವರ್ ಹೇಳಿದ್ದಾರೆ.
ದೂರು ಕೊಟ್ಟ ಮಹಿಳೆ ಮಾನಸಿಕ ಅಸ್ವಸ್ಥೆಯಾ..?
ಪರಮೇಶ್ವರ್ ಈ ಬಗ್ಗೆ ಮಾಹಿತಿ ಕೊಟ್ಟಿದ್ದು, ಯಡಿಯೂರಪ್ಪ ವಿರುದ್ಧ ದೂರು ನೀಡಿದ ಮಹಿಳೆ ಮಹಿಳೆ ಮಾನಸಿಕ ಅಸ್ವಸ್ಥೆ ಅಂತಾ ಹೇಳುತ್ತಿದ್ದಾರೆ ಎಂದು ಹೇಳಿದ್ದಾರೆ. ಅವರು ಕೈಯಲ್ಲಿ ದೂರು ಬರೆದುಕೊಟ್ಟಿಲ್ಲ. ಬದಲಾಗಿ ಟೈಪ್ ಮಾಡಿದ ದೂರನ್ನು ತಂದುಕೊಟ್ಟಿದ್ದಾರೆ. ಹೀಗಾಗಿ ಇದನ್ನು ಸೂಕ್ಷ್ಮವಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಪರಮೇಶ್ವರ್ ಹೇಳಿದ್ದಾರೆ.