CinemaHealth

ಬಾಲಿವುಡ್‌ ಬಿಗ್‌ಬಿ ಅಮಿತಾಬ್‌ಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು!

ಮುಂಬೈ; ಬಾಲಿವುಡ್‌ ಬಿಗ್‌ ಬಿ ಎಂದೇ ಖ್ಯಾತರಾಗಿರುವ ಅಮಿತಾ ಬಚ್ಚನ್ ಅವರು ಅನಾರೋಗ್ಯಕ್ಕೀಡಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಮುಂಬೈನ ಕೋಕಿಲಾಬೆನ್‌ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಮೂಲಗಳ ಪ್ರಕಾರ ಅವರರಿಗೆ ಆಂಜಿಯೋಪ್ಲಾಸ್ಟಿ ಮಾಡಲಾಗಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ; BSY ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ; ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ!

ಇಂದು ಬೆಳಗ್ಗೆ ಆಸ್ಪತ್ರೆಗೆ ದಾಖಲಾದ ಅಮಿತಾಬ್‌;

ಅಮಿತಾಬ್‌ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಮುಂಬೈನಲ್ಲಿರುವ ಕೋಕಿಲಾಬೆನ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿದ್ದು, ಈ ಹಿಂದೆಯೂ ಅವರು ಸರ್ಜರಿ ಮಾಡಿಸಿಕೊಂಡಿದ್ದರು. ಇದೀಗ ಅವರು ಮತ್ತೆ ಅನಾರೋಗ್ಯಕ್ಕೀಡಾಗಿದ್ದಾರೆ.. ಅವರಿ ಆಂಜಿಯೋಪ್ಲಾಸ್ಟಿ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ; ನಾಳೆಯೇ ಲೋಕಸಭಾ ಚುನಾವಣೆ ವೇಳಾಪಟ್ಟಿ ಪ್ರಕಟ; ರಂಗೇರಲಿದೆ ಅಖಾಡ!

ಅಮಿತಾಬ್‌ ಅಭಿಮಾನಿಗಳಲ್ಲಿ ಆತಂಕ;

ಅಮಿತಾಬ್‌ ಅವರು ಅನಾರೋಗ್ಯಕ್ಕೀಡಾಗಿದ್ದಾರೆ ಎಂಬ ಮಾಹಿತಿ ಬಂದ ತಕ್ಷಣ ಅಅಭಿಮಾನಿಗಳು ಆತಂಕಕ್ಕೀಡಾಗಿದ್ದಾರೆ. ಶೀಘ್ರ ಚೇತರಿಕೆಗೆ ಅಭಿಮಾನಿಗಳು ಪ್ರಾರ್ಥನೆ ಮಾಡುತ್ತಿದ್ದಾರೆ. ಆಸ್ಪತ್ರೆ ವತಿಯಿಂದ ಅವರ ಆರೋಗ್ಯದ ಬಗ್ಗೆ ಯಾವುದೇ ಬುಲೆಟಿನ್‌ ಇನ್ನೂ ರಿಲೀಸ್‌ ಆಗಿಲ್ಲ.

ಬಿಗ್‌ ಬಿ ಅನಾರೋಗ್ಯದ ಬಗ್ಗೆ ಮಾತನಾಡಿದ್ದ ಪತ್ನಿ ಜಯಾ ಬಚ್ಚನ್;‌

ಬಿಗ್‌ ಬಿ ಅನಾರೋಗ್ಯದ ಬಗ್ಗೆ ಇತ್ತೀಚೆಗಷ್ಟೇ ಅವರ ಪತ್ನಿ ಜಯಾ ಬಚ್ಚನ್‌ ಮಾತನಾಡಿದ್ದರು.. ಅವರಿಗೆ ಇದು ಸವಾಲಿನ ಸಮಯ ಎಂದು ಹೇಳಿದ್ದರು.. ಕಷ್ಟದ ಕಾಲದಲ್ಲಿ ಅವರೊಂದಿಗೆ ಮೌನವಾಗಿರಬೇಕು ಎಂದು ಭಾವುಕರಾಗಿ ನುಡಿದಿದ್ದರು.

ಇದನ್ನೂ ಓದಿ; BSY ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ; ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ!

Share Post