Politics

ಅಂಗನವಾಡಿ ಕಾರ್ಯಕರ್ತೆಯರ ಸಭೆ ನಡೆಸಿಲ್ಲ; ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ

ಬೆಳಗಾವಿ; ಅಂಗನವಾಡಿ ಕಾರ್ಯಕತೆರ್ಯರಿಗೆ ಇತ್ತೀಚೆಗೆ ಕೆಲಸದ ಒತ್ತಡ ಜಾಸ್ತಿಯಾಗಿದೆ. ಅವರ ಕೆಲಸದ ಒತ್ತಡವನ್ನು ನಿವಾರಿಸಬೇಕೆಂದು ಮನವಿ ಪತ್ರ ನೀಡಲು ಬಂದಿದ್ದರು. ಚುನಾವಣೆಗೆ ಸಂಬಂಧಪಟ್ಟಂತೆ ನಾನು ಸಭೆ ನಡೆಸಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವರಾದ  ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.

ನೀತಿ ಸಂಹಿತೆ ಉಲ್ಲಂಘಿಸಿ ಸಚಿವರು ಅಂಗವಾಡಿ ಕಾರ್ಯಕರ್ತೆಯರ ಸಭೆ ನಡೆಸಿದ್ದಾರೆ ಎಂದು ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಅಂಗನವಾಡಿ ಕಾರ್ಯಕರ್ತರಿಗೆ ಕೆಲಸದ ಒತ್ತಡ ಜಾಸ್ತಿಯಾಗಿದೆ. ಇತ್ತೀಚೆಗೆ ಪಲ್ಸ್ ಪೊಲೀಯೋ, ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಸರ್ವೆ ಮಾಡಿದ್ದರು. ಈಗ ಬಿಎಲ್‌ಒ ಆಗಿ ಕೆಲಸ ಮಾಡ್ತಿದ್ದಾರೆ. ಬಿಎಲ್‌ಒ ಆಗಲು ನಮಗೆ ತೊಂದರೆ ಆಗುತ್ತಿದೆ ಎಂದು ನನಗೆ  ಹೇಳಲು ಬಂದಿದ್ದಾರೆ. ಆದರೆ, ನಾನೇ ಅವರಿಗೆ ತಿಳಿ ಹೇಳಿ ಕೆಲಸ ಮಾಡಲು ಸೂಚಿಸಿದೆ ಎಂದರು.

ನಿಯಮ ಉಲ್ಲಂಘಿಸಿಲ್ಲ

ಚುನಾವಣೆ ವೇಳೆ ದೂರು ನೀಡುವುದು ಸರ್ವೆ ಸಾಮಾನ್ಯ. ದೂರು ಕೊಡಲಿ, ಓರ್ವ ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ನಾನು ನಿಯಮ ಉಲ್ಲಂಘಿಸಿಲ್ಲ. ನಾನು ದೇಶದ ಕಾನೂನಿಗೆ ಗೌರವ ಕೊಡುತ್ತೇನೆ. ನನಗೆ ಇದು ಐದನೇ ಚುನಾವಣೆ. ನನಗೆ ಚುನಾವಣೆ ಎದುರಿಸುವುದು ಹೇಗೆ ಎಂಬುದು ಗೊತ್ತು ಎಂದು ಸಚಿವರು ಹೇಳಿದರು.

ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದ ಮೃಣಾಲ್ ಹೆಬ್ಬಾಳ್ಕರ್

ಬೆಳಗಾವಿ ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಂಘಟನೆಗೆ ದುಡಿಯುತ್ತಿರುವೆ. ಕಾರ್ಯಕರ್ತರ ಕಷ್ಟ ಸುಖಗಳಿಗೆ ಸ್ಪಂದಿಸಿರುವೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್ ವಿಚಾರಕ್ಕೆ ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುವೆ ಎಂದು ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳ್ಕರ್ ಹೇಳಿದ್ದಾರೆ. ಹೈಕಮಾಂಡ್ ನನ್ನನ್ನು ಗುರುತಿಸಿ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನೀಡಿದರೆ, ಜಿಲ್ಲಾ ಹಾಗೂ ರಾಜ್ಯ ಮಟ್ಟದ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸ್ಪರ್ಧೆಗಿಳಿಯುವೆ ಎಂದರು. ಎದುರಾಳಿ ಯಾರೇ ಇದ್ದರೂ ತಲೆಕೆಡಿಸಿಕೊಂಡಿಲ್ಲ. ನಮ್ಮ ಮುಖಂಡರಾದ ಸತೀಶ್ ಜಾರಕಿಹೊಳಿ ಅವರು, ಅಪಾರ ಸಂಖ್ಯೆಯ ಕಾರ್ಯಕರ್ತರ ಆಶೀರ್ವಾದದೊಂದಿಗೆ ಕಣಕ್ಕಿಳಿಯುವೆ ಎಂದು ಹೇಳಿದರು.

Share Post