ನಾಳೆ ಸರಯೂ ನಾಲೆ ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಉತ್ತರಪ್ರದೇಶ : ಉತ್ತರಪ್ರದೇಶದ ಅತ್ಯಂತ ದೊಡ್ಡ ನಾಲಾ ಯೋಜನೆಯಾಗಿರುವ ಬಲರಾಂಪುರ ಜಿಲ್ಲೆಯ ಸರಯೂ ನಾಲೆ ನಾಳೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಳ್ಳಲಿದೆ. ಈ ಯೋಜನೆ ಪೂರ್ಣಗೊಳ್ಳಲು 9802 ಕೋಟಿ ವೆಚ್ಚ ತಗುಲಿದೆ.
ಅಕ್ಕಪಕ್ಕದ 9 ಜಿಲ್ಲೆಗಳಾದ ಬಹ್ರೈಚ್, ಗೊಂಡಾ, ಶ್ರಾವಸ್ತಿ, ಬಲರಾಮ್ಪುರ, ಬಸ್ತಿ, ಸಿದ್ಧಾರ್ಥನಗರ, ಸಂತ ಕಬೀರ್ ನಗರ, ಗೋರಖ್ಪುರ ಮತ್ತು ಮಹಾರಾಜ್ಗಂಜ್ಗಳ ಸುಮಾರು 25-30 ಲಕ್ಷ ರೈತರಿಗೆ ನೀರಾವರಿ ಅನುಕೂಲ ಮಾಡಿಕೊಡಲಿದೆ ಈ ಯೋಜನೆ.