ಅಲ್ಲಿ ಆಪರೇಷನ್ ಹಸ್ತ.. ಇಲ್ಲಿ ಆಪರೇಷನ್ ಜೆಡಿಎಸ್; ಯಾರು ಯಾವ ಪಕ್ಷಕ್ಕೆ ಹೋದರು..?
ಬೆಂಗಳೂರು; ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಆಪರೇಷನ್ ಜಾಸ್ತಿಯಾಗುತ್ತಿದೆ.. ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ಹಾಗೂ ಜೆಡಿಎಸ್ ನಾಯಕರನ್ನು ಸೆಳೆಯುತ್ತಿದ್ದಾರೆ.. ಈಗಾಗಲೇ ಮೈಸೂರು, ಚಿಕ್ಕಬಳ್ಳಾಪುರ ಮುಂತಾದೆಡೆ ಜೆಡಿಎಸ್ ನಾಯಕರನ್ನು ಸೆಳೆಯಲಾಗಿದೆ.. ಇದರ ನಡುವೆಯೇ ಜೆಡಿಎಸ್ ಕೂಡಾ ಕಾಂಗ್ರೆಸ್ ನಾಯಕರನ್ನು ಸೆಳೆಯುವ ಪ್ರಯತ್ನಕ್ಕೆ ಕೈ ಹಾಕಿದೆ.. ಕುಮಾರಸ್ವಾಮಿಯವರು ಕೂಡಾ ಹಲವು ಕಾಂಗ್ರೆಸ್ ಮುಖಂಡರನ್ನು ಸೆಳೆದಿದ್ದಾರೆ..
ಇದನ್ನೂ ಓದಿ; ನಾಳೆ ಬೆಂಗಳೂರಿನಲ್ಲಿ ಅಮಿತ್ ಶಾ ಸಮಾವೇಶ; ಚೆನ್ನಪಟ್ಟಣದಲ್ಲಿ ರೋಡ್ ಶೋ..
ವರುಣಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗೇ ಗಾಳ;
ಸಿಎಂ ಸಿದ್ದರಾಮಯ್ಯ ಅವರು ಇತ್ತೀಚೆಗೆ ಮೈಸೂರಿನಲ್ಲಿ ಜೆಡಿಎಸ್ ಮುಖಂಡ ಮಲ್ಲೇಶ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಂಡಿದ್ದರು. ಇದೀಗ ಅವರು ವರುಣಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಜೆಡಿಎಸ್ ಮಾಜಿ ಶಾಸಕ ಭಾರತಿ ಶಂಕರ್ ಅವರನ್ನೇ ಕಾಂಗ್ರೆಸ್ಗೆ ಸೆಳೆಯಲಾಗಿದೆ.. ವರುಣ ವಿಧಾನಸಭಾ ಕ್ಷೇತ್ರದ ಬಿಳಿಗೆರೆ ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಸಿದ್ದರಾಮಯ್ಯ ಅವರು ಜೆಡಿಎಸ್ ಮಾಜಿ ಶಾಸಕ ಭಾರತಿ ಶಂಕರ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ. ಭಾರತಿ ಶಂಕರ್ ಅವರು 2023ರ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಸ್ಪರ್ಧಿಸಿದ್ದ ವರುಣಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.
ಇದನ್ನೂ ಓದಿ; ಬೀಸೋ ದೊಣ್ಣೆಯಿಂದ ತಪ್ಪಿಸಿಕೊಂಡ ಕಾಂಗ್ರೆಸ್; ಸುಪ್ರೀಂನಿಂದ ಬಿಗ್ ರಿಲೀಫ್!
ಇನ್ನು ಚಿಕ್ಕಬಳ್ಳಾಪುರದಲ್ಲಿ ಜೆಡಿಎಸ್ನ ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೆಳೆಯಲಾಗಿದೆ.. ಇವರೂ ಕೂಡಾ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಿಂದ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.. ನಿನ್ನೆ ಸಿಎಂ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಕೆ.ಪಿ.ಬಚ್ಚೇಗೌಡ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.. ನಾಯಕನಿಗೆ ಕಾಂಗ್ರೆಸ್ ಬಾವುಟ ನೀಡಿ ಸಿದ್ದರಾಮಯ್ಯ ಅವರು ಪಕ್ಷಕ್ಕೆ ಬರಮಾಡಿಕೊಂಡರು.
ನಿಂಗಪ್ಪರನ್ನು ಸೆಳೆಯುವಲ್ಲಿ ಜೆಎಡಿಎಸ್ ಯಶಸ್ವಿ;
ಇನ್ನು ಹೀಗಿರುವಾಗಲೇ ಜೆಡಿಎಸ್ ನಾಯಕರು ಕೂಡಾ ಕಾಂಗ್ರೆಸ್ ಮುಖಂಡರನ್ನು ಸೆಳೆಯೋ ಪ್ರಯತ್ನ ಮಾಡುತ್ತಿದ್ದಾರೆ.. ಕೆಲವು ಕಡೆ ಯಶಸ್ವಿಯೂ ಆಗಿದ್ದಾರೆ.. ತುಮಕೂರಿನಲ್ಲಿ ಗೌರಿಶಂಕರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದರಿಂದ ಅಲ್ಲಿ ಜೆಡಿಎಸ್ ನಾಯಕ ಇರಲಿಲ್ಲ. ಈ ನಡುವೆ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಹೆಚ್ ನಿಂಗಪ್ಪ ಅವರನ್ನು ಜೆಡಿಎಸ್ಗೆ ಸೆಳೆಯಲಾಗಿದೆ. ಇಂದು ಅವರು ಕಾಂಗ್ರೆಸ್ಗೆ ರಾಜೀನಾಮೆ ನೀಡಿದ್ದಾರೆ. ನಿಂಗಪ್ಪ ಅವರನ್ನು ದೇವೇಗೌಡರು ಮಾತನಾಡಿಸಿದ್ದರು.. ಅದಾದ ಮೇಲೆ ನಿಂಗಪ್ಪ ಅವರು ಜೆಡಿಎಸ್ಗೆ ಸೇರ್ಪಡೆಯಾಗುತ್ತಿದ್ದಾರೆ.. ಇನ್ನು ಕಾಂಗ್ರೆಸ್ ಮುಖಂಡ, ದಿವಂಗತ ಅಂಬರೀಶ್ ಆಪ್ತ ಅಮರಾವತಿ ಚಂದ್ರಶೇಖರ್ ಅವರನ್ನು ಜೆಡಿಎಸ್ ಪಕ್ಷಕ್ಕೆ ಸೇರಿಸಿಕೊಳ್ಳಲು ಕುಮಾರಸ್ವಾಮಿ ಮುಂದಾಗಿದ್ದಾರೆ. ಅಮರಾವತಿ ಚಂದ್ರಶೇಖರ್ ಅವರನ್ನು ಕುಮಾರಸ್ವಾಮಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.. ಇದೀಗ ಮಂಡ್ಯದ ಖಾಸಗಿ ಹೋಟೆಲ್ನಲ್ಲಿ ಜೆಡಿಎಸ್ ಸೇರ್ಪಡೆ ಕಾರ್ಯಕ್ರಮ ಆಯೋಜಿಸಲಾಗಿದೆ.
ಇದನ್ನೂ ಓದಿ; ಬಿಸಿಲಲ್ಲಿ ನೀವು ಮಾಡುವ ಮಿಸ್ಟೇಕ್ ಕ್ಯಾನ್ಸರ್ಗೆ ಕಾರಣವಾಗುತ್ತೆ ಹುಷಾರ್!