ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡೋಲ್ಲ; ಸಿಎಂ ಸಿದ್ದರಾಮಯ್ಯ
ಮೈಸೂರು; ಸಿದ್ದರಾಮಯ್ಯ ಅವರು ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವುದಾಗಿ ಘೋಷಣೆ ಮಾಡಿದ್ದಾರೆ.. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ. ಆದರೆ ಪಕ್ಷದ ಪರವಾಗಿ ಕೆಲಸ ಮಾಡುತ್ತೇನ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಳ್ಳುತ್ತಿದ್ದು, ಈ ವೇಳೆ ಈ ಮಾತನ್ನು ಹೇಳಿದ್ದಾರೆ.
ಇದನ್ನೂ ಓದಿ; ಈಶ್ವರಪ್ಪ ಸ್ಪರ್ಧೆಯಿಂದ ಹಿಂದೆ ಸರಿಯಲ್ಲ; ಸುದ್ದಿಗೋಷ್ಠಿಯಲ್ಲಿ ಹೇಳಿದ್ದೇನು..?
ನಿನ್ನೆ ಸಿಎಂ ಸಿದ್ದರಾಮಯ್ಯ ಅವರು ಮೈಸೂರಿನ ವರುಣಾ ಕ್ಷೇತ್ರದಲ್ಲಿ ಪ್ರಚಾರ ನಡೆಸಿದರು.. ಈ ವೇಳೆ ವರುಣಾ ನನ್ನ ಅದೃಷ್ಟದ ಕ್ಷೇತ್ರ.. ಇಲ್ಲಿ ಗೆದ್ದಾಗ ನನಗೆ ಒಳ್ಳೆಯದಾಗಿದೆ.. ಇಲ್ಲಿಂದಲೇ ನಾನು ಎರಡು ಬಾರಿ ಸಿಎಂ ಆಗಿದ್ದೇನೆ ಎಂದು ಹೇಳಿದ್ದರು.. ಜೊತೆಗೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ 60 ಸಾವಿರ ಮತಗಳ ಲೀಡ್ ಕೊಡಬೇಕು ಎಂದು ಹೇಳಿದ್ದರು.. ಇನ್ನು ಸಿದ್ದರಾಮಯ್ಯ ಅಭಿಮಾನಿಗಳು ಮತ್ತೊಮ್ಮೆ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರು ಸ್ಪರ್ಧೆ ಮಾಡಬೇಕೆಂದು ಹೇಳಿದ್ದರು.. ಈ ಬಗ್ಗೆ ಪ್ರಶ್ನೆ ಮಾಡಿದಾಗ ಸಿದ್ದರಾಮಯ್ಯ ಅವರು, ನಾನು ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡಬಾರದು ಎಂದುಕೊಂಡಿದ್ದೇನೆ. ನನಗೂ ವಯಸ್ಸಾಗಲಿದೆ.. ಉತ್ಸಾಹದಿಂದ ಕೆಲಸ ಮಾಡಲು ಆಗುವುದಿಲ್ಲ. ಹೀಗಾಗಿ ಚುನಾವಣಾ ರಾಜಕೀಯದಿಂದ ಹಿಂದೆ ಸರಿಯೋದಾಗಿ ಅವರು ಹೇಳಿದ್ದಾರೆ.
ಇದನ್ನೂ ಓದಿ; ನಿಮಗೆ ಕನಸಲ್ಲಿ ಇದೆಲ್ಲಾ ಕಾಣ್ತಿದೆಯಾ..?; ಹಾಗಾದ್ರೆ ಸಿರಿ, ಸಂಪತ್ತು ನಿಮ್ಮದಾಗಲಿದೆ!
ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾರೆ.. ಹೀಗಾಗಿ ಅವರ ತವರು ಕ್ಷೇತ್ರಗಳಾದ ಮೈಸೂರು ಹಾಗೂ ಚಾಮರಾಜನಗರ ಕ್ಷೇತ್ರಗಳನ್ನು ಗೆಲ್ಲಿಸಿಕೊಂಡು ಬರಬೇಕಾದ ಅನಿವಾರ್ಯತೆ ಸಿಎಂ ಸಿದ್ದರಾಮಯ್ಯ ಅವರಿಗಿದೆ.. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬಿಡುವಿಲ್ಲದೆ ಮೈಸೂರು ಭಾಗದಲ್ಲಿ ಸಂಚಾರ ಮಾಡುತ್ತಿದ್ದಾರೆ.. ಕಳೆದ ವಾರ ಕೂಡಾ ಅವರು, ಮೂರು ದಿನಗಳ ಕಾಲ ಖಾಸಗಿ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿ ರಾಜಕೀಯ ತಂತ್ರಗಾರಿಕೆ ನಡೆಸಿದ್ದರು.. ಅಲ್ಲದೇ ಹಲವು ಬಿಜೆಪಿ ಹಾಗೂ ಜೆಡಿಎಸ್ ನಾಯಕರನ್ನು ಕಾಂಗ್ರೆಸ್ ಪಕ್ಷಕ್ಕೆ ಸೆಳೆದಿದ್ದರು.. ಇದೀಗ ಮತ್ತೆ ಒಂದಷ್ಟು ಮುಖಂಡರನ್ನು ಕಾಂಗ್ರೆಸ್ ಕರೆತರಲಾಗುತ್ತಿದೆ.
ಇದನ್ನೂ ಓದಿ; ಸೀರೆ ಕ್ಯಾನ್ಸರ್; ಸೀರೆ ಉಡೋದ್ರಿಂದಲೂ ಬರುತ್ತಂತೆ ಕ್ಯಾನ್ಸರ್!
ಇಂದು ಸುಮಾರು 30ಕ್ಕೂ ಹೆಚ್ಚು ಬಿಜೆಪಿ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದೆ.. ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಸಹೋದರ ಹಾಗೂ ಅವರ ಮಗ ಕೂಡಾ ಕಾಂಗ್ರೆಸ್ ಸೇರಿದ್ದಾರೆ.. ಹೀಗಾಗಿ ಸಿದ್ದರಾಮಯ್ಯ ಅವರು ಕಳೆದ ವಾರದಿಂಧ ನಿರಂತರವಾಗಿ ಆಪರೇಷನ್ ಹಸ್ತ ಮಾಡುತ್ತಿದ್ದಾರೆ.. ಜೊತೆಗೆ ಮೈಸೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಗೆಲುವು ನನ್ನ ಗೆಲುವು ಎಂದು ಸಿದ್ದರಾಮಯ್ಯ ಹೇಳಿಕೊಂಡು ಬರುತ್ತಿದ್ದಾರೆ. ಹೀಗಾಗಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಇದನ್ನೂ ಓದಿ; ಬಿಸಿಲಲ್ಲಿ ನೀವು ಮಾಡುವ ಮಿಸ್ಟೇಕ್ ಕ್ಯಾನ್ಸರ್ಗೆ ಕಾರಣವಾಗುತ್ತೆ ಹುಷಾರ್!