Districts

ನಾನು ಮುಖ್ಯ ಮಂತ್ರಿಯಾಗುತ್ತೇನೆಂದು ಎಲ್ಲಿಯೂ ಹೇಳಿಲ್ಲ: ಸಚಿವ ನಿರಾಣಿ

ಬೀಳಗಿ: ನಾನು ಮುಖ್ಯಮಂತ್ರಿ ಯಾಗುತ್ತೇನೆ ಎಂದು ಎಲ್ಲಿಯೂ ‌ಹೇಳಿಲ್ಲ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾ ರಿಕಾ ಸಚಿವ ಮುರಗೇಶ ನಿರಾಣಿ ಸ್ಪಷ್ಟಪಡಿಸಿದ್ದಾರೆ. ಬಾಗಲಕೋಟೆ ಜಿಲ್ಲೆ ‌ಬೀಳಗಿ ಪಟ್ಟಣ ಪಂಚಾಯತಿ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಿ ಅವರು ಮಾತನಾಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮರ್ಥವಾಗಿದ್ದಾರೆ.‌ ಅವರ ನೇತೃತ್ವದಲ್ಲಿ ಉತ್ತಮ ಕೆಲಸಗಳು ರಾಜ್ಯದಲ್ಲಿ ನಡೆಯುತ್ತಿವೆ. ಮುಂದಿನ ವಿಧಾನಸಭೆಯ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ಒಂದೂವರೆ ವರ್ಷಗಳ ಕಾಲ ನಾನು ಮಂತ್ರಿಯಾಗಿದ್ದಿಲ್ಲ, ಈಗ ನಮ್ಮ ಪಕ್ಷದ ನಾಯಕರು ಮಂತ್ರಿ ಜವಾಬ್ದಾರಿ ನೀಡಿದ್ದಾರೆ ಅದನ್ನು ನಿಭಾಯಿಸಲು ಕೆಲಸ ಮಾಡುತ್ತಿದ್ದೇನೆ ಎಂದರು.

ನನ್ನ ಬಗ್ಗೆ ಕೆಲವರು ಮಾತನಾಡುತ್ತಾರೆ ಅದಕ್ಕೆಲ್ಲ ಉತ್ತರ ಕೊಡುವ ಅಗತ್ಯ ವಿಲ್ಲ ಎಂದು ಪರೋಕ್ಷವಾಗಿ ತಮ್ಮ ವಿರೋಧಿಗಳಿಗೆ ತಿರುಗೇಟು ಕೊಟ್ಟರು.

Share Post