National

ಕಾಶ್ಮೀರದಲ್ಲಿ ಉಗ್ರರ ದಾಳಿ – 2 ಪೊಲೀಸರು ಬಲಿ

ಶ್ರೀನಗರ: ಕಾಶ್ಮೀರದಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಗೆ  ಇಬ್ಬರು ಪೊಲೀಸರು ಬಲಿಯಾಗಿದ್ದಾರೆ.

ಮೊಹಮ್ಮದ್ ಸುಲ್ತಾನ್ ಹಾಗೂ ಫಯಾಜ್ ಅಹ್ಮದ್ ಹುತಾತ್ಮರಾದ ಪೊಲೀಸರು. ಜಮ್ಮು ಮತ್ತು ಕಾಶ್ಮೀರದ ಉತ್ತರ ಬಂಡಿಪೋರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಗಾಯಗೊಂಡ ಪೊಲೀಸರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವಾಗ ಕೊನೆಯುಸಿರೆಳೆದಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಹಾಗೂ ಸಿಆರ್‌ಪಿಎಫ್ ಯೋಧರು ದಾಳಿ ನಡೆದ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿಸದ್ದಾರೆ.

Share Post