Politics

ಇಂದು ರಾಜ್ಯದಲ್ಲಿ ಮೋದಿ ಹವಾ; ಮೈಸೂರು, ಮಂಗಳೂರಲ್ಲಿ ಪ್ರಚಾರ

ಬೆಂಗಳೂರು; ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ಎರಡು ಬಾರಿ ರಾಜ್ಯಕ್ಕೆ ಬಂದು ಹೋಗಿರುವ ಪ್ರಧಾನಿ ನರೇಂದ್ರ ಮೋದಿ ಈಗ ಮತ್ತೆ ರಾಜ್ಯಕ್ಕೆ ಬರುತ್ತಿದ್ದಾರೆ.. ಇಂದು ನರೇಂದ್ರ ಮೋದಿಯವರು ಮೈಸೂರು ಹಾಗೂ ಮಂಗಳೂರಿನಲ್ಲಿ ಪ್ರಚಾರ ನಡೆಸಲಿದ್ದಾರೆ.. ಮೈಸೂರಿನಲ್ಲಿ ಮೋದಿ ಹಾಗೂ ದೇವೇಗೌಡರ ನೇತೃತ್ವದಲ್ಲಿ ಬೃಹತ್‌ ಸಮಾವೇಶ ಏರ್ಪಡಿಸಲಾಗಿದೆ.. ಇದರಲ್ಲಿ ಬಿಜೆಪಿ-ಜೆಡಿಎಸ್‌ ಒಗ್ಗಟ್ಟು ಪ್ರದರ್ಶಿಸುವ ಮೂಲಕ ಹಳೇ ಮೈಸೂರು ಭಾಗದಲ್ಲಿ ಹೆಚ್ಚಿನ ಸ್ಥಾನ ಗಳಿಸಲು ಪ್ಲ್ಯಾನ್‌ ಮಾಡಲಾಗಿದೆ.


ಮೈಸೂರಿನಲ್ಲಿ ಸಾರ್ವಜನಿಕ ಸಮಾವೇಶ;
ಮೊದಲಿಗೆ ಮೈಸೂರಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿಯವರು ಅಲ್ಲಿ ನಡೆಯುವ ಬೃಹತ್‌ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.. ಇಂದು ಸಂಜೆ 4 ಗಂಟೆಗೆ ಮೈಸೂರಿನಲ್ಲಿ ಸಮಾವೇಶ ಆಯೋಜಿಸಲಾಗಿದೆ.. ಇದನ್ನು ಮುಗಿಸಿಕೊಂಡು ಸಂಜೆ 6 ಗಂಟೆಗೆ ಮಂಗಳೂರಿಗೆ ಭೇಟಿ ಕೊಟ್ಟು ರೋಡ್‌ ಶೋ ನಡೆಸಲಿದ್ದಾರೆ.

ಮಂಗಳೂರಿನಲ್ಲಿ ಬೃಹತ್‌ ರೋಡ್‌ ಶೋ;
ಮಂಗಳೂರಿನ ಗೋಲ್ಡ್‌ ಪಿಂಚ್‌ ಸಿಟಿ ಮೈದಾನದಲ್ಲಿ ಬೃಹತ್‌ ಬಿಜೆಪಿ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.. ಆದ್ರೆ ಕಾರಣಾಂತರಗಳಿಂದ ಈ ಮೋದಿ ಸಮಾವೇಶ ರದ್ದು ಮಾಡಲಾಗಿದೆ.. ಅದರ ಬದಲಾಗಿ ಸುಮಾರು 2.5 ಕಿಲೋ ಮೀಟರ್‌ ರೋಡ್‌ ಶೋ ನಡೆಸಲಿದ್ದಾರೆ.. ಇದಕ್ಕೆ ರೂಟ್‌ ಮ್ಯಾಪ್‌ ಸಿದ್ಧ ಮಾಡಲಾಗಿದೆ.. ಜೊತೆಗೆ ರೋಡ್‌ ಶೋಗೆ ಬೇಕಾದ ಸಿದ್ಧತೆಗಳನ್ನು ಬಿಜೆಪಿ ವತಿಯಿಂದ ಕೈಗೊಳ್ಳಲಾಗುತ್ತಿದೆ..

ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಮಂಗಳೂರಿಗೆ ಬರಲಿದ್ದಾರೆ.. ಮೊದಲಿಗೆ ನಾರಾಯಣಗುರು ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ.. ಅನಂತರ ಲೇಡಿಹಿಲ್ ನಾರಾಯಣಗುರು ವೃತ್ತದಿಂದ ಹಂಪನಕಟ್ಟೆವರೆಗೆ ರೋಡ್‌ ಶೋ ನಡೆಯಲಿದೆ.. ಮಂಗಳೂರಿನ ಲೇಡಿಹಿಲ್ ನಾರಾಯಣ ಗುರು ಸರ್ಕಲ್ ನಿಂದ ಆರಂಭವಾಗಲಿರುವ ರೋಡ್‌ ಶೋ, ಲಾಲ್ ಭಾಗ್ ನ ಮಂಗಳೂರು ಪಾಲಿಕೆ ಕಚೇರಿ, ಬಳ್ಳಾಲ್ ಭಾಗ್ ದಾಟಿ ಎಂ.ಜಿ ರಸ್ತೆಯಲ್ಲಿ ಸಾಗಲಿರೋ ರೋಡ್ ಶೋ, ಪಿವಿಎಸ್ ಸರ್ಕಲ್ ಬಳಿ ಬಲಕ್ಕೆ ತಿರುಗಿ ನವಭಾರತ್ ಸರ್ಕಲ್ ತಲುಪಲಿದೆ.
ನಂತರ ಕೆ.ಎಸ್.ರಾವ್ ರಸ್ತೆ ಮೂಲಕ ಸಾಗಿ ಹಂಪನಕಟ್ಟೆ ಸಿಗ್ನಲ್ ಬಳಿ ರೋಡ್ ಶೋ ಅಂತ್ಯವಾಗಲಿದೆ.

 

Share Post