Politics

ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ಸರ್ಕಾರ; ನರೇಂದ್ರ ಮೋದಿ

ಚಿಕ್ಕಬಳ್ಳಾಪುರ; ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಕಿಸಾನ್ ಸಮ್ಮಾನ್‌  ಹಣದ ಜತೆಗೆ 2,000 ರೂ. ಸೇರಿಸಿ 4,000 ರೂಪಾಯಿಯನ್ನು ರೈತರಿಗೆ ನೀಡಲಾಗುತ್ತಿತ್ತು. ಆದರೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ಅದನ್ನು ಸ್ಥಗಿತಗೊಳಿಸಲಾಯಿತು. ಇದರಿಂದಲೇ ಕಾಂಗ್ರೆಸ್ ರೈತ ವಿರೋಧಿ ಎಂಬುದು ಗೊತ್ತಾಗುತ್ತದೆ. ರೈತ ವಿರೋಧಿ ಕಾಂಗ್ರೆಸ್​​ಗೆ ಇಲ್ಲಿನ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂಬುದಾಗಿ ಭಾವಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದರು.

 ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ವಿಕಸಿತ ಭಾರತಕ್ಕಾಗಿ ಎನ್‌ಡಿಎ ಅಭ್ಯರ್ಥಿಗಳನ್ನು ಬೆಂಬಲಿಸಿ. ಕರ್ನಾಟಕದ ಅಭಿವೃದ್ಧಿಗೆ ಕೇಂದ್ರ ಎನ್‌ಡಿಎ ಸರ್ಕಾರ ಬದ್ಧವಾಗಿದೆ. ಕರ್ನಾಟಕದ ಉಜ್ವಲ ಭವಿಷ್ಯಕ್ಕಾಗಿ ಎನ್‌ಡಿಎ ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.

ಚಿಕ್ಕಬಳ್ಳಾಪುರದ ನನ್ನ ಸಹೋದರ ಸಹೋದರಿಯರಿಗೆ ನಮಸ್ಕಾರಗಳು’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಮೋದಿ, ಸಂತ ಕೈವಾರಯ್ಯ ತಾತಯ್ಯ, ವಿಶ್ವೇಶ್ವರಯ್ಯ ಅವರನ್ನು ಸ್ಮರಿಸಿದರು. ನನ್ನನ್ನು ಪ್ರಧಾನಿ ಹುದ್ದೆಯಿಂದ ಕೆಳಗಿಳಿಸಲು ದೊಡ್ಡ ದೊಡ್ಡ ನಾಯಕರು ಯತ್ನಿಸುತ್ತಿದ್ದಾರೆ. ಅದಕ್ಕಾಗಿ ದೊಡ್ಡ ಮಟ್ಟದಲ್ಲಿ ಸಂಚು ನಡೆಯುತ್ತಿದೆ. ಆದರೆ, ನನಗೆ ದೇಶದ ತಾಯಂದಿರ ಆಶೀರ್ವಾದ ಇದೆ ಎಂದು ಮೋದಿ ಹೇಳಿದರು.

Share Post