ಡಿವೈಡರ್ ಗೆ ಕಾರು ಡಿಕ್ಕಿ; ಐದು ಮಂದಿ ದುರ್ಮರಣ
ಲಕ್ನೋ; ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಕಾರೊಂದು ಅಪಘಾತಕ್ಕೀಡಾಗಿ ದುರಂತ ಸಂಭವಿಸಿದೆ.. ದುರಂತದಲ್ಲಿ ಐದು ಮಂದಿ ಸಾವನ್ನಪ್ಪಿದ್ದಾರೆ.. ಮೂವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ..
ಉತ್ತರ ಪ್ರದೇಶದ ಆಗ್ರಾದ ಕುಬೇರ್ ಪುರದ ಯಮುನಾ ಎಕ್ಸ್ ಪ್ರೆಸ್ ವೇ ನಲ್ಲಿ ಈ ದುರಂತ ನಡೆದಿದೆ. ಅತಿವೇಗವಾಗಿ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ.
ಕಾರಿನಲ್ಲಿ ಒಟ್ಟು 8 ಮಂದಿ ಪ್ರಯಾಣ ಮಾಡುತ್ತಿದ್ದರು. ಉತ್ತರಪ್ರದೇಶದ ಗ್ರೇಟರ್ ನೋಯ್ಡಾದಿಂದ ಬಿಹಾರದ ಡಿಯೋರಿಯಾಕ್ಕೆ ಹೋಗುತ್ತಿದ್ದರು. ಈ ವೇಳೆ ಕಾರು ಆಗ್ರಾದ ಕುಬೇರ್ಪುರ ಬಳಿ ಬರುತ್ತಿದ್ದಂತೆ ಡಿವೈಡರ್ಗೆ ಗುದ್ದಿದೆ..
ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಎಸ್ಎನ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ. ಡ್ರೈವರ್ ಮದ್ಯಪಾನ ಮಾಡಿ ಕಾರು ಚಾಲನೆ ಮಾಡುತ್ತಿದ್ದದೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ.