ಸಂಸದನಿಂದ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; SIT ತನಿಖೆಗೊಪ್ಪಿಸಿದ ಸರ್ಕಾರ
ಬೆಂಗಳೂರು; ಕೆಲ ದಿನಗಳಿಂದ ಒಂದಷ್ಟು ಅಸಹ್ಯಕರ ವಿಡಿಯೋಗಳು ಹರಿದಾಡುತ್ತಿವೆ.. ಅದರಲ್ಲಿರೋದು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಎಂದು ಕೆಲವರು ಆರೋಪ ಮಾಡುತ್ತಿದ್ದಾರೆ.. ಈ ಬಗ್ಗೆ ಸಾರ್ವಜನಿಕರು ತನಿಖೆಗೆ ಆಗ್ರಹ ಮಾಡುತ್ತಿದ್ದರು.. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕ್ರಮ ತೆಗೆದುಕೊಂಡಿದೆ.. ವಿಡಿಯೋಗಳ ಕುರಿತಂತೆ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ರಚನೆ ಮಾಡಿದೆ..
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.. ʻ
ʻಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ. ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವೀಡಿಯೋ ತುಣುಕುಗಳು ಹರಿದಾಡುತ್ತಿದ್ದು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಅವರ ಮನವಿಗೆ ಸ್ಪಂದಿಸಿ ಈ ನಿರ್ಣಯ ಕೈಗೊಳ್ಳಲಾಗಿದೆ.ʼ
ಹೀಗಂತ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ… ಇನ್ನು ಇದಕ್ಕೂ ಮೊದಲು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿಯವರು ಈ ಪ್ರಕರಣದ ಬಗ್ಗೆ ತನಿಖೆ ನಡೆಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದರು.. ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕೇಳಿಬಂದಿದ್ದು, ಇದರ ತನಿಖೆ ವಿಶೇಷ ತಂಡ ರಚನೆ ಮಾಡುವಂತೆ ಮಹಿಳಾ ಆಯೋಗ ಸರ್ಕಾರಕ್ಕೆ ಮನವಿ ಮಾಡಿತ್ತು..
ಈ ಮಧ್ಯೆ ಸಂಸದ ಪ್ರಜ್ವಲ್ ರೇವಣ್ಣ ಚುನಾವಣೆ ಮುಗಿಯುತ್ತಿದ್ದಂತೆ ವಿದೇಶಕ್ಕೆ ತೆರಳಿದ್ದಾರೆ ಎಂದು ಹೇಳಲಾಗುತ್ತಿದೆ.. ಈ ಬಗ್ಗೆ ಸಿಎಂ ಕಚೇರಿ ಕೂಡಾ ಅಧಿಕೃತವಾಗಿ ಹೇಳಿದೆ..