ಅಶ್ಲೀಲ ವಿಡಿಯೋ ವೈರಲ್ ಪ್ರಕರಣʼ ಜೆಡಿಎಸ್‌ನಿಂದ ಪ್ರಜ್ವಲ್ ಉಚ್ಛಾಟನೆ!
ಬೆಂಗಳೂರು; ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಆಗಿರುವ ಪ್ರಕರಣ ಸಂಬಂಧ ಪ್ರಜ್ವಲ್ ವಿರುದ್ಧ ಪಕ್ಷ ಕ್ರಮ ಕೈಗೊಂಡಿದೆ ಎಂದು ಕುಮಾರಸ್ವಾಮಿ ಇಂದು ಬೆಳಗ್ಗೆ ಹೇಳಿದ್ದರು.. ಇದೀಗ ಸಂಸದ ಪ್ರಜ್ವಲ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ತಿಳಿದುಬಂದಿದೆ..
ಇದನ್ನೂ ಓದಿ; ಹೆಣ್ಣು ಕೊಟ್ಟ ಅತ್ತೆಯನ್ನೇ ಮದುವೆಯಾದ ಅಳಿಯ!
ಪೆನ್‌ಡ್ರೈವ್ ಬಿಡುಗಡೆಯಾದ ಮೇಲೆ ಪಕ್ಷ ಮುಜುಗರಕ್ಕೊಳಗಾಗಿತ್ತು.. ಈ ಮುಜುಗರ ತಪ್ಪಿಸಿಕೊಳ್ಳಲು ಜೆಡಿಎಸ್ ಪಕ್ಷ ಪ್ರಜ್ವಲ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರು ಈ ಮಹತ್ವದ ಆದೇಶ ಹೊರಡಿಸಿದ್ದಾರೆ..
ಇದನ್ನೂ ಓದಿ; ಎರಡನೇ ಮಹಡಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆಯೇ ಒಂದು ಪವಾಡ!
ಪ್ರಜ್ವಲ್ ಅವರು ಜೆಡಿಎಸ್ ಪಕ್ಷದ ಚಿಹ್ನೆಯಡಿ ಚುನಾವಣೆಗೆ ಸ್ಪರ್ಧೆ ಮಾಡಿದ್ದಾರೆ.. ಫಲಿತಾಂಶ ಬಾಕಿ ಇದೆ.. ಒಂದು ವೇಳೆ ಪ್ರಜ್ವಲ್ ಗೆದ್ದರೆ ಪಕ್ಷ ಯಾವ ತೀರ್ಮಾನ ಕೈಗೊಳ್ಳುತ್ತೆ ಎಂಬುದು ಮಾತ್ರ ಕುತೂಹಲಕ್ಕೆ ಕಾರಣವಾಗಿದೆ.. ರಾಜ್ಯ ಸರ್ಕಾರ ಈ ಪ್ರಕರಣವನ್ನು ಎಸ್‌ಐಟಿ ತನಿಖೆಗೆ ಒಪ್ಪಿಸಿದೆ.. ಈ ನಡುವೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಎಲ್ಲೆಡೆ ಆಗ್ರಹಗಳು ಕೇಳಿಬರುತ್ತಿವೆ.. ಹೀಗಾಗಿ ಜೆಡಿಎಸ್ ನಾಯಕರು ಮುಜುಗರಿಂದಾಗಿ ಪ್ರಜ್ವಲ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ.
ಒಂದು ವೇಳೆ ಪ್ರಜ್ವಲ್ ಅವರು ಚುನಾವಣೆಯಲ್ಲಿ ಗೆದ್ದರೂ ಪಕ್ಷ ನೈತಿಕೆ ಹೊಣೆ ಹೊತ್ತು ರಾಜೀನಾಮೆ ನೀಡುವಂತೆ ಕೇಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ..
ಇದನ್ನೂ ಓದಿ; ಮನೆ ಕೆಲಸದವರು, ಪೊಲೀಸ್ ಅಧಿಕಾರಿಗಳ ಮೇಲೂ ದೌರ್ಜನ್ಯ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್